ಹೈದರಾಬಾದ್: ತೆಲಂಗಾಣದಲ್ಲಿ ಕಳೆದೊಂದು ದಿನದಲ್ಲಿ 3 ಹೊಸ ಕೋವಿಡ್ ರೂಪಾಂತರ ಒಮಿಕ್ರಾನ್ ಪ್ರಕರಣ ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 41ಕ್ಕೆ ಏರಿದೆ. ಈ ಪೈಕಿ 10 ರೋಗಿಗಳು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಆರೋಗ್ಯ ಇಲಾಖೆ ಶನಿವಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಕೊರೊನಾ ಅಪಾಯದಲ್ಲಿರುವ ದೇಶಗಳಿಂದ ಆಗಮಿಸಿದ 333 ಪ್ರಯಾಣಿಕರನ್ನು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಗಿದೆ. ಈ ಪೈಕಿ 8 ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಒಮಿಕ್ರಾನ್ ಸೋಂಕು... ಇಂದು 7 ಮಂದಿಗೆ ದೃಢ, 38ಕ್ಕೇರಿದ ಸೋಂಕಿತರ ಸಂಖ್ಯೆ...!
ಕೊರೊನಾ ಹೆಚ್ಚಿರುವ ದೇಶಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಪ್ರಯಾಣಿಸಿದ 3 ಪ್ರಯಾಣಿಕರ 3 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಒಮಿಕ್ರಾನ್ ದೃಢಪಟ್ಟಿದೆ. ಇನ್ನುಳಿದ 5 ಮಾದರಿಗಳ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.
ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 400 ತಲುಪಿದೆ.