ಹೈದರಾಬಾದ್(ತೆಲಂಗಾಣ): ತೆಲಗು ಕಿರುತೆರೆ ನಟಿ ರಾತ್ರಿ ವೇಳೆ ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್ ಸವಾರನೋರ್ವನಿಗೆ ಡಿಕ್ಕಿ ಹೊಡೆದಿರುವ ಘಟನೆ ಹೈದರಾಬಾದ್ನ ಶಂಶಾಬಾದ್ ಏರ್ಪೋರ್ಟ್ ರೋಡ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಶೂಟಿಂಗ್ನಲ್ಲಿ ಭಾಗಿಯಾಗಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ಸವಾರ ಬಾಸ್ಕರ್ಗೆ ನಟಿ ಲಹರಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರ ಬೆನ್ನಲ್ಲೇ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿರಿ: ರಾವತ್ ಸೇರಿ ಎಲ್ಲರ ಪಾರ್ಥಿವ ಶರೀರ ದೆಹಲಿಯತ್ತ ರವಾನೆ.. ಪ್ರಧಾನಿ ಮೋದಿಯಿಂದ ಅಂತಿಮ ದರ್ಶನ
ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ನಟಿಯನ್ನ ಡ್ರಂಕ್ ಅಂಡ್ ಡ್ರೈವ್ ಟೆಸ್ಟ್ಗೊಳಪಡಿಸಿದ್ದು, ಈ ವೇಳೆ, ನಟಿ ಕುಡಿದ ಅಮಲಿನಲ್ಲಿರಲಿಲ್ಲ ಎಂಬುದು ಗೊತ್ತಾಗಿದೆ. ಅತಿ ವೇಗವಾಗಿ ಕಾರು ಚಲಾವಣೆ ಮಾಡಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ನಟಿ ಲಹರಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.