ಕೊಟ್ಟಾಯಂ(ಕೇರಳ) : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ದೇವಸ್ಥಾನದ ಅರ್ಚಕನೋರ್ವನನ್ನು ಬಂಧಿಸಲಾಗಿದೆ. ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದೆ.
ಪರಿಪ ಶ್ರೀ ಪುರಂ ದೇವಸ್ಥಾನದ ಅರ್ಚಕ ಶಿರೀಶ್(33) ಬಂಧನಕ್ಕೊಳಗಾಗಿರುವ ಪೂಜಾರಿ. ರಾಶಿ ಭವಿಷ್ಯ ತಿಳಿದುಕೊಳ್ಳುವ ಉದ್ದೇಶದಿಂದ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಗೆ ಪೂಜಾರಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ. ಜೊತೆಗೆ ತನ್ನನ್ನು ರೂಂನೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆಂದು ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ.
ತನ್ನ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಪೋಷಕರು ಮಕ್ಕಳ ರಕ್ಷಣಾ ಸಮಿತಿಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.