ಕಾನ್ಪುರ: ಬಾಡಿಗೆದಾರನೊಬ್ಬ ಮನೆಯೊಡತಿ ಮತ್ತು ಅವಳ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಮಹಿಳೆ ಮತ್ತು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದು, ಕಾನ್ಪುರದ ಅಕ್ಬರ್ಪುಟ್ನಲ್ಲಿ ಈ ಘಟನೆ ನಡೆದಿದೆ.
ಘಟನೆ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನಿಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಆತನನ್ನು ಪೊಲೀಸರು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಈತನ ಪತ್ನಿ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಚೌಧರಿ ತಿಳಿಸಿದ್ದಾರೆ.