ETV Bharat / bharat

Jammu Encounter: ಓರ್ವ ಉಗ್ರನ ಬೇಟೆಯಾಡಿದ ಭದ್ರತಾ ಪಡೆ - ಆವಂತಿಪೋರಾದಲ್ಲಿ ಉಗ್ರನ ಹತ್ಯೆ

ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್ ನಡೆದಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

terrorist-killed-after-encounter-breaks-out-in-jammu-kashmir
Jammu Encounter: ಓರ್ವ ಉಗ್ರನ ಹೊಸಕಿಹಾಕಿದ ಭದ್ರತಾ ಪಡೆ
author img

By

Published : Dec 12, 2021, 8:59 AM IST

ಶ್ರೀನಗರ(ಜಮ್ಮು ಕಾಶ್ಮೀರ): ಕಣಿವೆನಾಡಿನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾನುವಾರ ಬೆಳ್ಳಂಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಅಪರಿಚಿತ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಆವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಪಡೆಯೂ ಪ್ರತಿದಾಳಿ ನಡೆಸಿದೆ ಎಂದು ಜಮ್ಮು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಎಎನ್​ಐಗೆ ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳು ಮತ್ತು ಜಮ್ಮು ಕಾಶ್ಮೀರ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಬಂಡಿಪೋರಾ ಜಿಲ್ಲೆಯ ಗುಲ್ಶನ್​​​​​​​​ ಚೌಕ್​​ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಈ ಕೃತ್ಯದಲ್ಲಿ ಪಾಕಿಸ್ತಾನಿ ಉಗ್ರನ ಕೈವಾಡವಿದೆ ಎಂದು ಐಜಿಪಿ ವಿಜಯ್‌ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಬಂಡಿಪೋರಾದಲ್ಲಿ ಇಬ್ಬರು ಪೊಲೀಸರು ಹುತಾತ್ಮ.. ಕೃತ್ಯದಲ್ಲಿ ಪಾಕ್‌ ಉಗ್ರನ ಕೈವಾಡ ಎಂದ ಐಜಿಪಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.