ETV Bharat / bharat

ಪುಲ್ವಾಮಾ ಎನ್‌ಕೌಂಟರ್‌: ಒಬ್ಬ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ.. ಪ್ರತ್ಯೇಕ ದಾಳಿಯಲ್ಲಿ ನಾಲ್ವರ ಹತ್ಯೆ - ಓರ್ವ ಉಗ್ರನ ಹತ್ಯೆಗೈದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಪುಲ್ವಾಮಾ ಎನ್‌ಕೌಂಟರ್‌
ಪುಲ್ವಾಮಾ ಎನ್‌ಕೌಂಟರ್‌
author img

By

Published : Jun 20, 2022, 7:01 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಪುಲ್ವಾಮಾದ ಚತ್ಪೋರಾದಲ್ಲಿ ಉಭಯ ಕಡೆಯವರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯೊಂದಿಗೆ ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಕ್ರಮವಾಗಿ ಎರಡು ಪ್ರತ್ಯೇಕ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ನಾಲ್ವರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾ, ಕುಲ್ಗಾಂನಲ್ಲೂ ಸೇನಾ ಕಾರ್ಯಾಚರಣೆ: 4 ಉಗ್ರರ ಹತ್ಯೆ: ಕುಪ್ವಾರದ ಚಂಡಿಗಮ್ ಲೋಲಾಬ್ ಪ್ರದೇಶದ ಅರಣ್ಯದ ಅಡಗುತಾಣದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ತಿಳಿದು ಬಂದಿದೆ.

ಏತನ್ಮಧ್ಯೆ, ಭಾನುವಾರ, ಡಿಎಚ್ ಪೋರಾ ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇದುವರೆಗೆ ಇಬ್ಬರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ. ಅವರನ್ನು ಶ್ರೀನಗರದ ಹಾರಿಸ್ ಶರೀಫ್ ಮತ್ತು ಕುಲ್ಗಾಮ್‌ನ ಜಾಕಿರ್ ಪದ್ದರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ಎನ್‌ಕೌಂಟರ್‌ : ನಾಲ್ವರು ಭಯೋತ್ಪಾದಕರನ್ನ ಸದೆಬಡಿದ ಐಎಎಫ್ ವಿಶೇಷ ಪಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.