ಶ್ರೀನಗರ‘(ಜಮ್ಮು ಕಾಶ್ಮೀರ): ಭಯೋತ್ಪಾದಕರು ಶ್ರೀನಗರದ ಹೊರವಲಯವಾದ ಬೆಮಿನಾದಲ್ಲಿರುವ ಶೇರ್ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(SKIMS) ಬಳಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದಾದ ಸ್ವಲ್ಪ ಸಮಯದ ನಂತರ ಜನಸಂದಣಿ, ರೋಗಿಗಳ ಮಧ್ಯೆ ನುಸುಳಿ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಅದೃಷ್ಟವಶಾತ್ ಯಾವುದೇ ರೀತಿಯ ಸಾವು- ನೋವು ಸಂಭವಿಸಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಶಿಮ್ಲಾ: 6 ವರ್ಷದ ಬಾಲಕನ ಹೊತ್ತೊಯ್ದ ಚಿರತೆ