ಶ್ರೀನಗರ (ಜಮ್ಮು-ಕಾಶ್ಮೀರ): ಸ್ವಾತಂತ್ರ್ಯೋತ್ಸವ ದಿನವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ನಡೆಸಿದ್ದಾರೆ. ಎರಡು ಕಡೆಗಳಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಗಾಯಗೊಂಡಿದ್ದಾರೆ. ಶ್ರೀನಗರದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ಎಸೆಯಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ದೌಡಾಯಿಸಿ ಸ್ಥಳವನ್ನು ಸುತ್ತುವರೆದಿದ್ದಾರೆ. ಮತ್ತೊಂದೆಡೆ, ಬುದ್ಗಾಮ್ ಜಿಲ್ಲೆಯ ಗೋಪಾಲಪೋರ ಗ್ರಾಮದಲ್ಲಿಯೂ ಭಯೋತ್ಪಾದಕರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ನಾಗರಿಕ ಕರಣ್ ಸಿಂಗ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಕಾಶ್ಮೀರದಲ್ಲಿ 2 ಕಡೆ ಉಗ್ರರಿಂದ ಗ್ರೆನೇಡ್ ದಾಳಿ: ಓರ್ವ ಪೊಲೀಸ್, ನಾಗರಿಕನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ದಿನ ಎರಡು ಕಡೆಗಳಲ್ಲಿ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದಾರೆ.