ಬುದ್ಗಾಮ್(ಜಮ್ಮು-ಕಾಶ್ಮೀರ): ನಿನ್ನೆಯಷ್ಟೇ ಪುಲ್ವಾಮಾದ ಕಾಕಪೋರಾ ರೈಲ್ವೆ ನಿಲ್ದಾಣದಲ್ಲಿ ಉಗ್ರರು ಕರ್ತವ್ಯನಿರತ ಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ, ಓರ್ವನ ಹತ್ಯೆಗೆ ಕಾರಣವಾಗಿದ್ದರು. ಇದರ ಬೆನ್ನಲ್ಲೇ ಇದೀಗ ಬುದ್ಗಾಮ್ನಲ್ಲಿರುವ ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.
ಇಂದು ಸಂಜೆ ಬುದ್ಗಾಮ್ನ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಪೊಲೀಸ್ ಠಾಣೆ ಮೇಲೆ ಅನೇಕ ಸುತ್ತು ಗುಂಡು ಹಾರಿಸಿದ್ದಾರೆ. ಇದರ ಬೆನ್ನಲ್ಲೇ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಉಗ್ರರ ಹಿಡಿಯಲು ಭದ್ರತಾ ಪಡೆಗಳು ಈಗಾಗಲೇ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಇದನ್ನೂ ಓದಿ: ಪುಲ್ವಾಮಾ ಉಗ್ರರ ದಾಳಿಗೆ ಆರ್ಪಿಎಫ್ ಸಿಬ್ಬಂದಿ ಹುತಾತ್ಮ, ಸಿಸಿಟಿವಿಯಲ್ಲಿ ದೃಶ್ಯ ಸೆರೆ