ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಚೈತ್ಯ ಭೂಮಿಗೆ ಭೇಟಿ ನೀಡಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಗೌರವ ಸಲ್ಲಿಸಿದರು.
ಕೊರೊನಾ ಹಿನ್ನೆಲೆ ಬಾಬಾ ಸಾಹೇಬರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕೆಲ ಮಂದಿಯಷ್ಟೇ ಚೈತ್ಯ ಭೂಮಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಮಹಾ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರ ಸರ್ಕಾರ ಜನತಾ ಕರ್ಫ್ಯೂವನ್ನು 15 ದಿನಗಳವರೆಗೆ ಘೋಷಿಸಿದೆ.
ಆಸ್ಪತ್ರೆಯಲ್ಲಿ ಆಮ್ಲಜನಕ, ಬೆಡ್ ಕೊರತೆಯಾಗದಂತೆ ನೋಡಿಕೊಳ್ಳುವುದು. ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಹೇರಲಾಗಿದೆ. ಸೆಕ್ಷನ್ 144 ಹಾಗೂ ಜನ ಗುಂಪುಗೂಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.