ETV Bharat / bharat

ರಸ್ತೆಯಲ್ಲಿ ಆಟೋ ಚಾಲಕನಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪುಂಡ: ವಿಡಿಯೋ ವೈರಲ್ - young man showing a pistol on the road

ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕೈಯಲ್ಲಿ ಪಿಸ್ತೂಲ್​ ಹಿಡಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ ಚಾಲಕರು, ದಾರಿಹೋಕರು, ಬೀದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

pistol
ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಯುವಕ
author img

By

Published : Aug 28, 2021, 11:49 AM IST

ಛತ್ತೀಸ್‌ಗಢ: ಬಿಲಾಸ್ಪುರದ ಕಂಪನಿ ಗಾರ್ಡನ್ ರಸ್ತೆಯಲ್ಲಿ ಯುವಕನೊರ್ವ ಕುಡಿದ ಮತ್ತಿನಲ್ಲಿ ಆಟೋ ಚಾಲಕರು, ದಾರಿಹೋಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಪಿಸ್ತೂಲ್​ ತೋರಿಸಿ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಯುವಕ

ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇದರಿಂದ ರಸ್ತೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಯುವಕನ ಪುಂಡಾಟವನ್ನು ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಆಶ್ಚರ್ಯಕರ ಸಂಗತಿ ಎಂದರೆ, ಈ ವೇಳೆ ನೂರಾರು ವಾಹನಗಳು ಮತ್ತು ಜನರು ರಸ್ತೆಯಲ್ಲಿ ಹೋಗುತ್ತಿದ್ದರೂ ಯಾರೂ ಕೂಡ ಯುವಕನನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಬೀದಿ ವ್ಯಾಪಾರಿಯೊಬ್ಬರು ಘಟನೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಗಳನ್ನು ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.