ಮುಂಬೈ: ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲುವಾಸ ಅನುಭವಿಸುತ್ತಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ರ ಜಾಮೀನು ಅರ್ಜಿಯನ್ನು ಅಕ್ಟೋಬರ್ 26 ರಂದು ಬಾಂಬೆ ಹೈಕೋರ್ಟ್ ನಡೆಸಲಿದೆ.
ಹಡಗಿನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿದ ಆರೋಪದಡಿ ಅಕ್ಟೋಬರ್ 2 ರಂದು ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 11 ಮಂದಿಯನ್ನು ಮಾದಕ ವಸ್ತು ನಿಯಂತ್ರಣ ದಳ (ಎನ್ಸಿಬಿ) ಬಂಧಿಸಿತ್ತು. ನಿನ್ನೆಯಷ್ಟೇ ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ: ಮುಂಬೈ ಆರ್ಥರ್ ರೋಡ್ ಜೈಲಿಗೆ ಬಂದು ಮಗನ ಭೇಟಿ ಮಾಡಿದ ಶಾರೂಖ್ ಖಾನ್
ಈ ಆದೇಶವನ್ನು ಪ್ರಶ್ನಿಸಿ ಆರ್ಯನ್ ಖಾನ್ ಪರ ವಕೀಲ ಅಲಿ ಕಾಶೀದ್ ದೇಶಮುಖ್ ಅವರು ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅ.26ಕ್ಕೆ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಶಾರೂಕ್ ಮನೆ ಮೇಲೆ ಎನ್ಸಿಬಿ ದಾಳಿ
ಇತ್ತ ಇಂದು ಪ್ರಸ್ತುತ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ನನ್ನು ನೋಡಲು ನಟ ಶಾರೂಕ್ ಖಾನ್ ಜೈಲಿಗೆ ಆಗಮಿಸಿದ್ದು, ಅತ್ತ ಶಾರೂಕ್ ಮನೆ ಮೇಲೆ ಎನ್ಸಿಬಿ ದಾಳಿ ನಡೆಸಿದೆ.