ETV Bharat / bharat

ಸತತ 2ನೇ ಬಾರಿ ಸಿಎಂ ಆದ ಯೋಗಿ ಆದಿತ್ಯನಾಥ್​: ಬ್ರಿಟಿಷ್ ಸರ್ಕಾರದಿಂದ ಅಭಿನಂದನೆ - ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್

ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಯೋಗಿ ಆದಿತ್ಯನಾಥ್​ಗೆ ಬ್ರಿಟಿಷ್ ಸರ್ಕಾರ ಅಭಿನಂದನೆ ಸಲ್ಲಿಸಿದೆ.

ಯೋಗಿ ಆದಿತ್ಯನಾಥ್​
ಯೋಗಿ ಆದಿತ್ಯನಾಥ್​
author img

By

Published : Mar 28, 2022, 12:54 PM IST

ಲಖನೌ: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಯುನೈಟೆಡ್ ಕಿಂಗ್ಡಮ್ ಸರ್ಕಾರದ ಪರವಾಗಿ ಪತ್ರವೊಂದನ್ನು ಬರೆದು ಎರಡನೇ ಬಾರಿಗೆ ರಾಜ್ಯದ ಸಿಎಂ ಆಗಿದ್ದಕ್ಕಾಗಿ ಅಭಿನಂದಿಸಿದ್ದಾರೆ. ಅಷ್ಟೇ ಅಲ್ಲದೆ, ಎಲ್ಲಿಸ್ ಕೂಡ ಯೋಗಿ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದೊಂದಿಗಿನ ಬಾಂಧವ್ಯ ಮತ್ತಷ್ಟು ಹೆಚ್ಚಿಸಲು ಬ್ರಿಟಿಷ್​ ಸರ್ಕಾರ ಬದ್ಧವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬ್ರಿಟನ್ ಮತ್ತು ಉತ್ತರ ಪ್ರದೇಶದ ನಡುವೆ ಮುಂದಿನ 10 ವರ್ಷಗಳ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, 2021 ರಲ್ಲಿ ಉಭಯ ದೇಶಗಳ ಪ್ರಧಾನ ಮಂತ್ರಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದರಲ್ಲಿ ಯುನೈಟೆಡ್ ಕಿಂಗ್ಡಮ್ ಯುಪಿಯನ್ನು ತನ್ನ ಪ್ರಮುಖ ಪಾಲುದಾರನನ್ನಾಗಿ ಮಾಡಲು ಬಯಸುತ್ತದೆ ಎಂದು ತಿಳಿಸಲಾಗಿದೆ.

ಬ್ರಿಟಿಷ್ ಕೌನ್ಸಿಲ್‌ನ ಗೋಯಿಂಗ್ ಗ್ಲೋಬಲ್ ಪಾರ್ಟ್‌ನರ್‌ಶಿಪ್ ಗ್ರಾಂಟ್ ಅಡಿ, ಶಿಕ್ಷಣ ಕ್ಷೇತ್ರಗಳಲ್ಲಿ ಭಾರತೀಯ ವಿಶ್ವವಿದ್ಯಾಲಯಗಳಿಗೆ ಸಹಾಯ ಮಾಡಲು ಮೂರು ಬ್ರಿಟಿಷ್ ಸಂಸ್ಥೆಗಳು ಅಮಿಟಿ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಅಲ್ಲದೇ, ಬ್ರಿಟಿಷ್ - ಭಾರತ ಸಂಬಂಧವು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ನೀಲನಕ್ಷೆಯನ್ನು ಅಭಿವೃದ್ಧಿಪಡಿಸಲು ಎದುರು ನೋಡುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಮುಖ ಯುಕೆ ಕಂಪನಿಗಳಾದ ವೆಬ್ಲಿ ಆ್ಯಂಡ್ ಸ್ಕಾಟ್, ಟ್ರಿನಿಟಿ ನ್ಯಾಚುರಲ್ ಗ್ಯಾಸ್, ಹಿಂದೂಸ್ತಾನ್ ಯೂನಿಲಿವರ್ ಮತ್ತು ಅಸೋಸಿಯೇಟೆಡ್ ಬ್ರಿಟಿಷ್ ಫುಡ್ಸ್ ಈಗಾಗಲೇ ಉತ್ತರ ಪ್ರದೇಶದಲ್ಲಿ ಹೂಡಿಕೆ ಮತ್ತು ಉತ್ಪಾದನಾ ಘಟಕಗಳನ್ನು ಸ್ಥಾಪಿಸಿವೆ. ವೆಬ್ಲಿ ಮತ್ತು ಸ್ಕಾಟ್ ಉತ್ತರ ಪ್ರದೇಶದ ಹಾರ್ಡೋಯ್‌ನಲ್ಲಿ ಸ್ಥಾವರವನ್ನು ಸ್ಥಾಪಿಸಿವೆ. ಈ ಕಂಪನಿಯು ಮುಂಬರುವ 12 ತಿಂಗಳಲ್ಲಿ ಮತ್ತೊಂದು ಕಾರ್ಖಾನೆಯನ್ನು ಸ್ಥಾಪಿಸಲು ಯೋಜಿಸಿದೆ, ಇದರಲ್ಲಿ 150 ಜನರಿಗೆ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ಐವರು ವಿದ್ಯಾರ್ಥಿಗಳಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.