ನವದೆಹಲಿ: "ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿದೆ" ಎಂದು ಆಸ್ಪತ್ರೆ ಹೇಳಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಆರ್ಮಿ ಆಸ್ಪತ್ರೆ (ಆರ್ & ಆರ್) ತಿಳಿಸಿದೆ.
ಇದನ್ನೂ ಓದಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆಸ್ಪತ್ರೆಗೆ ದಾಖಲು
ನಿನ್ನೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬೆಳಗ್ಗೆ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು.