ETV Bharat / bharat

ವಿಡಿಯೋ: ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬೈಕ್​ ಸವಾರ! - ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ

ಮಗಳ ಮನೆಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ.

Accident Video in West bengal
Accident Video in West bengal
author img

By

Published : Mar 18, 2022, 7:59 PM IST

ರಾಯ್​ಗಂಜ್​(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಜಲ್ಪೈಗುರಿಗೆ ಮೋಟಾರ್​ ಸೈಕಲ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೋರ್ವ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಜಲ್ಪೈಗುರಿಯಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದ ವೇಳೆ ರಾಯ್​ಗಂಜ್​ನ ಮರ್ನೈ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 34ರಲ್ಲಿ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂಭಾಗದ ಕಾಂಕ್ರೀಟ್​​ ಡಿವೈಡರ್​ಗೆ ಬೈಕ್​ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬೈಕ್​ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಆಲ್​​ ಇಂಗ್ಲೆಂಡ್​ ಚಾಂಪಿಯನ್​ಶಿಪ್​​​​: ಸೆಮಿಫೈನಲ್​ಗೆ ಲಗ್ಗೆ ಹಾಕಿದ ಲಕ್ಷ್ಯಸೇನ್​

ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ. ಮೃತದೇಹವನ್ನು ರಾಯಗಂಜ್​​ನ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆ​ಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.