ನವದೆಹಲಿ : ಭಾರತ ಮತ್ತು ಬ್ರಿಟನ್ ನಡುವೆ ತಾತ್ಕಾಲಿಕವಾಗಿ ವಿಮಾನ ಸಂಚಾರವನ್ನು ಬಂದ್ ಮಾಡಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶಿಸಿದೆ.
ಬ್ರಿಟನ್ನಿಂದ ಬಂದವರಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ-ಬ್ರಿಟನ್ ನಡುವೆ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.
ಇದನ್ನೂ ಓದಿ: 2019-20ರ ಹಣಕಾಸು ವರ್ಷದಲ್ಲಿ ಏರ್ ಇಂಡಿಯಾಗೆ 3,600 ಕೋಟಿ ರೂ. ನಷ್ಟ
2021ರ ಜನವರಿ 7ರವರೆಗೆ ಈ ನಿರ್ಬಂಧ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ.