ETV Bharat / bharat

ಗಡಿ ವಿಚಾರದಲ್ಲಿ ಈಗ ಯಾವುದೇ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಶಿಂದೆ - ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಗಡಿ ವಿಚಾರದಲ್ಲಿ ಈಗ ಯಾವುದೇ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಶಿಂದೆ
There is no need for any politics on the border issue now Maharashtra CM Shinde
author img

By

Published : Dec 19, 2022, 1:50 PM IST

ಮುಂಬೈ (ಮಹಾರಾಷ್ಟ್ರ): ಕರ್ನಾಟಕ - ಮಹಾರಾಷ್ಟ್ರ ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಸೋಮವಾರ ಆರಂಭವಾದ ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಅಂತರರಾಜ್ಯ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವರು ಇದೇ ಮೊದಲ ಬಾರಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಬೇಡ, ಗಡಿ ನಿವಾಸಿಗಳೊಂದಿಗೆ ನಾವು ಒಟ್ಟಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಶಿಂಧೆ ಹೇಳಿದರು.

ಇದಕ್ಕೂ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಂಧೆ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು 1956 ರ ರಾಜ್ಯ ಮರುವಿಂಗಡಣೆ ಕಾಯಿದೆಯ ಅನುಷ್ಠಾನದ ಸಮಯದಿಂದಲೂ ಇದೆ. ಆಗಿನ ಮಹಾರಾಷ್ಟ್ರ ಸರ್ಕಾರವು ಕರ್ನಾಟಕದೊಂದಿಗೆ ತನ್ನ ಗಡಿಯನ್ನು ಮರುಹೊಂದಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಗಡಿಯಲ್ಲಿ ಎಂಇಎಸ್ ಪುಂಡಾಟ: ರಾಜ್ಯ ಪ್ರವೇಶಿಸಲು ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.