ETV Bharat / bharat

ದೆಹಲಿಯಲ್ಲಿ ಲಾಕ್​ಡೌನ್​ ಇಲ್ಲ: ಖಚಿತಪಡಿಸಿದ ಮುಖ್ಯಮಂತ್ರಿ ಕೇಜ್ರಿವಾಲ್ - ದೆಹಲಿಯಲ್ಲಿ ಕೊರೊನಾ ಹಾವಳಿ

ದೆಹಲಿಯಲ್ಲೂ 2ನೇ ಹಂತದ ಕೊರೊನಾ ಹಾವಳಿ ಜೋರಾಗಿರುವ ಕಾರಣ ಮುಖ್ಯಮಂತ್ರಿ ಕೇಜ್ರಿವಾಲ್‌ ಆರೋಗ್ಯ ಸಚಿವರು ಸೇರಿ ವಿವಿಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

CM Arvind Kejriwal
CM Arvind Kejriwal
author img

By

Published : Apr 2, 2021, 5:39 PM IST

Updated : Apr 2, 2021, 6:15 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ 2ನೇ ಹಂತದ ಕೋವಿಡ್​​ ಅಲೆ ಜೋರಾಗಿದ್ದು, ದಿನ ಕಳೆದಂತೆ ಹೆಚ್ಚಿನ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ದೆಹಲಿಯಲ್ಲಿ ಲಾಕ್​ಡೌನ್​ ಹೇರಿಕೆ ಇಲ್ಲ ಎಂದ ಕೇಜ್ರಿವಾಲ್​

ಸಭೆ ಮುಕ್ತಾಯದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್​, ನಾವು ಕೋವಿಡ್​ ವ್ಯಾಕ್ಸಿನ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ನಿನ್ನೆ ಒಂದೇ ದಿನ 71,000 ಜನರಿಗೆ ಲಸಿಕೆ ನೀಡಲಾಗಿದೆ ಎಂದರು. ಜತೆಗೆ ಯಾವುದೇ ಕಾರಣಕ್ಕೂ ಲಾಕ್​ಡೌನ್ ಹೇರಿಕೆ ಮಾಡುವುದಿಲ್ಲ ಎಂದು ಖಚಿತಪಡಿಸಿದರು.

ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 3,583 ಹೊಸ ಪ್ರಕರಣ ಕಾಣಿಸಿಕೊಂಡಿವೆ. ಪ್ರಕರಣ ಹೆಚ್ಚಾಗದಂತೆ ತಡೆಗಟ್ಟಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದಿರುವ ಕೇಜ್ರಿವಾಲ್​, ಯಾವುದೇ ಕಾರಣಕ್ಕೂ ಜನರು ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ದೆಹಲಿಯಲ್ಲಿ ಇಲ್ಲಿಯವರೆಗೆ 6,65,220 ಕೋವಿಡ್​ ಪ್ರಕರಣ ಕಾಣಿಸಿಕೊಂಡಿದ್ದು, ಇದರಲ್ಲಿ ಸದ್ಯ 10,498 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಒಂದೇ ದಿನ 3 ಸಾವಿರಕ್ಕಿಂತಲೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.

Last Updated : Apr 2, 2021, 6:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.