ಭೋಪಾಲ್: ಹೆಣ್ಣುಮಕ್ಕಳ ಪೋಷಣೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನವನ್ನು ಜಾರಿಗೆ ತರಲಾಗಿದೆ. ಆದರೆ ಇದೀಗ ಮಧ್ಯಪ್ರದೇಶ ಸರ್ಕಾರವು ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಸರ್ಕಾರಿ ಕಾರ್ಯಕ್ರಮಗಳನ್ನು ಪ್ರಾರಂಭಿಸುವ ಮುನ್ನ ಹೆಣ್ಣನ್ನು ದೇವರ ಸ್ಥಾನದಲ್ಲಿರಿಸಿ ಪೂಜಿಸುವಂತೆ ಸೂಚಿಸಿ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಆರಂಭಿಸುವ ಮುಂಚೆ ಮುಖ್ಯ ಅತಿಥಿಗಳು ಕನ್ಯಾ ಪೂಜೆ ನೆರವೇರಿಸಬೇಕು. ಈ ಕುರಿತಂತೆ ಸಂಬಂಧಪಟ್ಟ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ ಎಂದು ಮಧ್ಯಪ್ರದೇಶ ಸರ್ಕಾರ ತಿಲಿಸಿದೆ.
![ಆದೇಶ ಪ್ರತಿ](https://etvbharatimages.akamaized.net/etvbharat/prod-images/mp-bho-balikapoojan-pkg-10058_25122020004240_2512f_1608837160_241.jpg)
ಸೆಪ್ಟೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೊರಡಿಸಿದ ಪ್ರಕಟಣೆ ಆಧಾರದ ಮೇಲೆ ಈ ಆದೇಶ ಹೊರಡಿಸಲಾಗಿದೆ. 4 ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಹೆಣ್ಣುಮಕ್ಕಳನ್ನು ಪೂಜಿಸುವುದಾಗಿ ಸಿಎಂ ತಿಳಿಸಿದ್ದರು. ಇದೀಗ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ಯಾ ಪೂಜೆ ಸಂಪ್ರದಾಯವನ್ನು ಮುಂದುವರಿಸಬೇಕು ಎಂದು ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ಲಿಖಿತ ರೂಪದಲ್ಲಿ ಆದೇಶ ಪ್ರತಿಗಳನ್ನು ಕಳುಹಿಸಲಾಗಿದೆ.