ಮಧ್ಯಪ್ರದೇಶ: ರೈಸನ್ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೈಖೇಡಾ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿದ್ದ 30 ಗ್ರಾಂ ಚಿನ್ನ ಮತ್ತು 500 ಗ್ರಾಂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಕಳ್ಳ ಪರಾರಿಯಾಗಿದ್ದಾನೆ.
ಸೈಖೇಡಾ ಗ್ರಾಮದ ನಿವಾಸಿ ಸುನಿಲ್ ಕುಮಾರ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುನಿಲ್ ಕುಟುಂಬದೊಂದಿಗೆ ದೇವನಾರಾಯಣ್ ದೇವಸ್ಥಾನಕ್ಕೆ ಹೋಗಿದ್ದರು. ದೇವರ ದರ್ಶನ ಮುಗಿಸಿಕೊಂಡು ಮನೆಗೆ ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಸುನಿಲ್ ಕುಮಾರ್ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.