ETV Bharat / bharat

ಜಮ್ಮು- ಕಾಶ್ಮೀರಕ್ಕೆ ಇದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನ ರದ್ದು: ಇಂದು ಮೂರನೇ ವಾರ್ಷಿಕೋತ್ಸವ - ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ

ಆರ್ಟಿಕಲ್ 370 ರ ರದ್ದತಿಯೊಂದಿಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಆ ಮೂಲಕ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ಥಿತ್ವಕ್ಕೆ ಬಂದಿದ್ದವು.

Third anniversary of abrogation of Article 370
ಜಮ್ಮು- ಕಾಶ್ಮೀರಕ್ಕೆ ಇದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನ ರದ್ದು
author img

By

Published : Aug 5, 2022, 7:26 AM IST

ಶ್ರೀನಗರ: ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನ ರದ್ದುಗೊಳಿಸಿ ಮೂರು ವರ್ಷಗಳಾದವು. 2019ರ ಇದೇ ದಿನದಂದು ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಆರ್ಟಿಕಲ್ 370 ಮತ್ತು 35 ಎ ರದ್ದತಿ ಮಸೂದೆ ಮಂಡಿಸುವ ಮೂಲಕ ಅದನ್ನು ರದ್ದುಗೊಳಿಸಿದ್ದರು. ಇದಕ್ಕೆ ಸಂಸತ್​ ಅನುಮೋದನೆ ಕೂಡಾ ನೀಡಿತ್ತು.

ಆರ್ಟಿಕಲ್ 370 ರ ರದ್ದತಿಯೊಂದಿಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಲಾಗಿತ್ತು. ಆ ಮೂಲಕ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ಥಿತ್ವಕ್ಕೆ ಬಂದಿದ್ದವು.

ಆಗಸ್ಟ್ 5ಕ್ಕೆ ಒಂದು ದಿನ ಮೊದಲು, ಕಣಿವೆಯ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ನಾಯಕರನ್ನು ಬಂಧಿಸಲಾಗಿತ್ತು. ಅಷ್ಟೇ ಅಲ್ಲ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಹಲವಾರು ತಿಂಗಳುಗಳ ಕಾಲ ಕರ್ಫ್ಯೂ ವಿಧಿಸಲಾಗಿತ್ತು. ಕಾಶ್ಮೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು ಮತ್ತು ಇಂಟರ್ನೆಟ್ ಸೇರಿದಂತೆ ಫೋನ್ ಸೇವೆಗಳನ್ನು ಹಲವಾರು ತಿಂಗಳುಗಳವರೆಗೆ ಸ್ಥಗಿತಗೊಳಿಸಲಾಗಿತ್ತು.

ಆರ್ಟಿಕಲ್ 370 ರ ರದ್ದತಿಯೊಂದಿಗೆ ಜಮ್ಮು ಮತ್ತು ಕಾಶ್ಮೀರದ ಸಂವಿಧಾನವನ್ನು ಸಹ ರದ್ದುಗೊಳಿಸಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯನ್ನು ಜಾರಿಗೆ ತರಲಾಯಿತು. ಅದರ ಅಡಿ ಗೃಹ ವ್ಯವಹಾರಗಳ ಸಚಿವಾಲಯವು ಜಮ್ಮು ಮತ್ತು ಕಾಶ್ಮೀರದ ಆಡಳಿತದ ಹೊಣೆ ಹೊತ್ತುಕೊಂಡಿದೆ.

ಆರ್ಟಿಕಲ್ 370 ರದ್ದತಿಯ ಮೂರನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಪೀಪಲ್ಸ್ ಕಾನ್ಫರೆನ್ಸ್, ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಕರಾಳ ದಿನ ಎಂದು ಆಚರಿಸಲಾಗುತ್ತಿದೆ ಎಂದಿದೆ. ಆಗಸ್ಟ್ 5, 2019 ರ ನಂತರ, ಕೇಂದ್ರ ಸರ್ಕಾರವು ಪ್ರತ್ಯೇಕತಾವಾದಿ ಸಂಘಟನೆಗಳನ್ನು ನಿಷೇಧಿಸಿದೆ.

ಇದನ್ನು ಓದಿ:ಕಳ್ಳತನಕ್ಕೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್​​ ಕಾನ್ಸ್​​ಟೇಬಲ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.