ನವದೆಹಲಿ : ಸ್ಟಾರ್ಟ್‌ಅಪ್‌ಗಳು ನೂತನ ಭಾರತದ ಬೆನ್ನೆಲುಬಾಗಲಿವೆ. ದೇಶದ ಅಭಿವೃದ್ಧಿಯಲ್ಲಿ ಸ್ಟಾರ್ಟ್‌ಅಪ್‌ಗಳು ಪ್ರಮುಖ ಪಾತ್ರವಹಿಸುತ್ತವೆ. ದೇಶದ ನವ ಉದ್ಯಮಿಗಳು ಜಾಗತಿಕವಾಗಿ ದೇಶವನ್ನು ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಕೃಷಿ, ವಾಣಿಜ್ಯ, ಆರೋಗ್ಯ ಸೇರಿದಂತೆ ಹಲವು ವಲಯಗಳ ಸುಮಾರು 150ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳ ಜೊತೆಗೆ ಸಂವಾದ ನಡೆಸಿದ ವೇಳೆ ಪ್ರಧಾನಿ ಮೋದಿ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಜನವರಿ 16ರಂದು ರಾಷ್ಟ್ರೀಯ ಸ್ಟಾರ್ಟ್‌ಅಪ್ ದಿನವನ್ನಾಗಿ ಘೋಷಣೆ ಮಾಡಿದ್ದಾರೆ.
ಸ್ಟಾರ್ಟ್‌ಅಪ್‌ಗಳ ಜಗತ್ತಿನಲ್ಲಿ ಭಾರತದ ಧ್ವಜವನ್ನು ಮೇಲಕ್ಕೇರಿಸುತ್ತಿರುವ ಎಲ್ಲಾ ಯುವಕರನ್ನು ನಾನು ಅಭಿನಂದಿಸುತ್ತೇನೆ. ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ನೀತಿಗಳಲ್ಲಿ ಸರ್ಕಾರವು ದೊಡ್ಡ ಬದಲಾವಣೆಗಳನ್ನು ಮಾಡುತ್ತಿದೆ. ಈ ದಶಕ 'ಟೆಕೆಡ್' ಆಗಿದೆ ಎಂದು ಮೋದಿ ಹೇಳಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸ್ಟಾರ್ಟ್‌ಅಪ್‌ಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದರು. ಗ್ರಾಮೀಣ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಸ್ಟಾರ್ಟ್‌ಅಪ್‌ಗಳು ಕೆಲಸ ಮಾಡಬೇಕು. ಸ್ಟಾರ್ಟ್‌ಅಪ್‌ಗಳು ಈ ಸಾಮರ್ಥ್ಯವನ್ನು ಹೊಂದಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಭಾರತೀಯ ಎರಡು ಉದಯೋನ್ಮುಖ ಸ್ಟಾರ್ಟ್‌ಅಪ್‌ಗಳಿಗೆ ವಿಶ್ವಬ್ಯಾಂಕ್ ಗ್ರೂಪ್ ಅವಾರ್ಡ್