ETV Bharat / bharat

ಅಂಬಾನಿ ಕುಟುಂಬಕ್ಕೆ ವ್ಯಕ್ತಿಯಿಂದ ಬೆದರಿಕೆ: ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವುದಾಗಿ ಕರೆ - Ambani family

ಮುಂಬೈನ ಸರ್​​ ಹೆಚ್​​ಎನ್​​ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ ಲೈನ್​ ನಂಬರ್​ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

threat-calls-to-ambani-family-at-reliance-hospital
ಅಂಬಾನಿ ಕುಟುಂಬಕ್ಕೆ ವ್ಯಕ್ತಿಯಿಂದ ಬೆದರಿಕೆ: ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವುದಾಗಿ ಕರೆ
author img

By

Published : Oct 5, 2022, 4:13 PM IST

ಮುಂಬೈ (ಮಹಾರಾಷ್ಟ್ರ): ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ. ಮುಂಬೈನ ಸರ್​​ ಹೆಚ್​​ಎನ್​​ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ ಲೈನ್​ ನಂಬರ್​ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಡಿಬಿ ಮಾರ್ಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಇಂದು ಮಧ್ಯಾಹ್ನ 12.57ರ ಸುಮಾರಿಗೆ ಬೆದರಿಕೆ ಕರೆ ಮಾಡಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಹಾಗೂ ಅಂಬಾನಿ ಕುಟುಂಬದ ಕೆಲವರ ಹೆಸರು ಹೇಳಿ ಬೆದರಿಕೆ ಹಾಕಲಾಗಿದೆ.

ಸದ್ಯ ಈ ಬಗ್ಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂಬೈ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.

ಕಳೆದ ಆಗಸ್ಟ್‌ನಲ್ಲೂ ಆಸ್ಪತ್ರೆಗೆ ಕರೆ ಮಾಡಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಆಭರಣ ವ್ಯಾಪಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಜೀವ ಬೆದರಿಕೆ: ಆತ್ಮಾಹುತಿ ಸ್ಫೋಟದ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.