ETV Bharat / bharat

ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿದ ನಾಗ್ಪುರ ಪೊಲೀಸರ ತಂಡ - etv bharat kannada

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಮಂಗಳವಾರ ಬೆಳಗ್ಗೆ ಸತತ ಮೂರು ಬೆದರಿಕೆ ಕರೆಗಳು ಬಂದ ಹಿನ್ನೆಲೆ ನಾಗ್ಪುರ ಪೊಲೀಸರ ತಂಡ ಬೆಳಗಾವಿಗೆ ಭೇಟಿ ನೀಡಿದೆ.

threatening-calls-to-gadkari-office-case-nagpur-police-team-visits-belgavi
ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿದ ನಾಗ್ಪುರ ಪೊಲೀಸರ ತಂಡ
author img

By

Published : Mar 22, 2023, 9:18 PM IST

ನಾಗ್ಪುರ(ಮಹಾರಾಷ್ಟ್ರ): ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಮಂಗಳವಾರ ಬೆಳಗ್ಗೆ ಸತತ ಮೂರು ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಪೊಲೀಸರು ತಕ್ಷಣ ಗಮನ ಹರಿಸಿದ್ದು, ತನಿಖೆ ಆರಂಭಿಸಿದ್ದಾರೆ. ಇದರ ನಡುವೆ ನಾಗ್ಪುರ ಪೊಲೀಸರ ತಂಡ ಇಂದು(ಬುಧವಾರ) ಬೆಳಗಾವಿಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಮತ್ತೊಂದೆಡೆ ಈ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬೆಂಗಳೂರಿನ ಯುವತಿಯನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಸದ್ಯ ಯುವತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೂ ಬೆದರಿಕೆ ಕರೆಯ ನಂಟು? : ಈ ವಿಚಾರವಾಗಿ ನಾಗ್ಪುರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಮಾತನಾಡಿ, ಪ್ರಾಥಮಿಕ ತನಿಖೆಯಲ್ಲಿ ಯುವತಿ ಭಾಗಿಯಾಗಿರುವುದು ಪತ್ತೆಯಾಗದ ಕಾರಣ ಆಕೆಯನ್ನು ಇನ್ನೂ ವಶಕ್ಕೆ ಪಡೆದಿಲ್ಲ ಎಂದು ಹೇಳಿದರು. ಮಂಗಳವಾರ ಬೆಳಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಸುಲಿಗೆಗೆ ಒತ್ತಾಯಿಸಿ ಮೂರು ಬೆದರಿಕೆ ಕರೆಗಳು ಬಂದ ನಂತರ ನಾಗ್ಪುರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸುಲಿಗೆ ಪ್ರಕರಣದ ಆರೋಪಿಗಳ ಶೋಧ ಕಾರ್ಯಕ್ಕಾಗಿ ಪೊಲೀಸರು ಇಂದು ಬೆಳಗಾವಿ ಜೈಲಿಗೆ ಬಂದಿದ್ದರು. ಇದೇ ವೇಳೆ ಈ ಪ್ರಕರಣದಲ್ಲಿ ಬೆಂಗಳೂರಿಗೂ ಸಂಬಂಧ ಇರುವುದು ಬಯಲಾಗಿದ್ದು, ಯುವತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದಾರೆ.

ಏನಿದು ಪ್ರಕರಣ: ನಾಗ್ಪುರದ ಖಮ್ಲಾದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಮಂಗಳವಾರ ಬೆಳಗ್ಗೆ ಮೂರು ಬೆದರಿಕೆ ಕರೆಗಳು ಬಂದಿದ್ದವು. ಜಯೇಶ್ ಕಾಂತ ಅಲಿಯಾಸ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದಿದ್ದವು. ಈ ವೇಳೆ ಆರೋಪಿಗಳು 10 ಕೋಟಿ ರೂ. ನೀಡುವಂತೆ ಬೆದರಿಸಿದ್ದರು. ಈ ಕರೆಯೂ ಬೆಂಗಳೂರಿನ ಯುವತಿಯ ಮೊಬೈಲ್ ಫೋನ್ ನಿಂದ ಬಂದಿದೆ. ಆದರೆ ಯುವತಿ ಈ ಕರೆಯನ್ನು ಮಾಡಲ್ಲ, ಆಕೆಯ ಸ್ನೇಹಿತ ಜಯೇಶ್ ಕಾಂತ ಅಲಿಯಾಸ್ ಪೂಜಾರಿ ಜೈಲಿನಲ್ಲಿ ಬಂಧಿಯಾಗಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿ ತೀವ್ರವಾಗಿ ತನಿಖೆ ನಡೆಸುತ್ತಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕಳೆದ 2 ತಿಂಗಳಲ್ಲಿ ಎರಡು ಬೆದರಿಕೆ ಕರೆಗಳು ಬಂದಿವೆ. ಜಯೇಶ್ ಕಾಂತ ಅಲಿಯಾಸ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಯಾರಾದರೂ ಕಿಡಿಗೇಡಿತನ ಮಾಡುತ್ತಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ ರಾಹುಲ್ ಮದನೆ ತಿಳಿಸಿದ್ದಾರೆ.

ಬೆಳಗ್ಗೆ ಅಲ್ಪಾವಧಿಯಲ್ಲಿ ಮೂರು ಕರೆ: ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಇಂದು ಬೆಳಗ್ಗೆ ಮೂರು ಬೆದರಿಕೆ ಕರೆಗಳು ಬಂದಿವೆ. ಮೊದಲ ಕರೆಯಲ್ಲಿ ಯಾವುದೇ ಸಂಭಾಷಣೆ ಇರಲಿಲ್ಲ. ಆದರೆ, ನಂತರದ ಎರಡು ಕರೆಗಳಲ್ಲಿ ಆರೋಪಿಗಳು ಹತ್ತು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ವರದಿಯಾಗಿದೆ. ಕಳೆದ ಬಾರಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಈ ಬಾರಿ ಹಾಗೆ ಮಾಡಬೇಡಿ ಎಂದು ಆರೋಪಿಗಳು ಫೋನ್ ಮೂಲಕ ಸಿಬ್ಬಂದಿಗೆ ಎಚ್ಚರಿಸಿದ್ದಾರೆ.

ಗಡ್ಕರಿ ಕಚೇರಿ, ನಿವಾಸಕ್ಕೆ ಭದ್ರತೆ ಹೆಚ್ಚಳ: ಮೂರು ಬೆದರಿಕೆ ಕರೆಗಳು ಬಂದ ನಂತರ, ನಿತಿನ್ ಗಡ್ಕರಿ ಅವರ ನಿವಾಸ ಮತ್ತು ನಾಗ್ಪುರದ ಸಾರ್ವಜನಿಕ ಸಂಪರ್ಕ ಕಚೇರಿಯ ಹೊರಗೆ ಪೊಲೀಸ್​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎರಡು ತಿಂಗಳ ಹಿಂದೆ ಜನವರಿ 14 ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮೂರು ಕೊಲೆ ಬೆದರಿಕೆಗಳು ಬಂದಿದ್ದವು.

ಇದನ್ನೂ ಓದಿ:ನವದೆಹಲಿಯ ಬ್ರಿಟಿಷ್ ಹೈಕಮಿಷನ್ ಕಚೇರಿಗೆ ಅಳವಡಿಸಿದ್ದ ಭದ್ರತಾ ಬ್ಯಾರಿಕೇಡ್​ಗಳ ತೆರವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.