ETV Bharat / bharat

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ: ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಕೇಸ್​ - ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಸೇರಿ ಮೂವರ ವಿರುದ್ಧ ಕೇಸ್​ ದಾಖಲಾಗಿದೆ.

threats-to-salman-khan-case-gangsters-lawrence-bishnoi-and-goldy-brar
ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ: ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಕೇಸ್​
author img

By

Published : Mar 19, 2023, 11:09 PM IST

ಮುಂಬೈ (ಮಹಾರಾಷ್ಟ್ರ): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇಮೇಲ್ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಗ್ಯಾಂಗ್​ಸ್ಟರ್​ಗಳಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ರೋಹಿತ್ ಗಾರ್ಗ್ ವಿರುದ್ಧ ಮುಂಬೈ ಪೊಲೀಸರು ಕೇಸ್​ ದಾಖಲಿಸಿದ್ದಾರೆ. ಸಲ್ಮಾನ್ ಖಾನ್ ಅವರ ಮ್ಯಾನೇಜರ್ ಪ್ರಶಾಂತ್ ಗುಂಜಾಲ್ಕರ್ ನೀಡಿದ ದೂರಿನ ಮೇರೆಗೆ ಐಪಿಸಿಯ ಸೆಕ್ಷನ್ 120 (ಬಿ), 34 ಮತ್ತು 506 (2)ರಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮಾರ್ಚ್ 18ರಂದು ಸಲ್ಮಾನ್ ಖಾನ್ ಅವರಿಗೆ ಬೆದರಿಕೆಯ ಇಮೇಲ್ ಬಂದಿತ್ತು. ಇದರಲ್ಲಿ ನನಗೆ ಬಾಲ್ಯದಿಂದಲೂ ಸಲ್ಮಾನ್ ಮೇಲೆ ಕೋಪವಿದೆ. ಅಲ್ಲದೇ, ಸಲ್ಮಾನ್​ಗೆ ತುಂಬಾ ಅಹಂ ಇದೆ. ನಾವು ಅವರ ಅಹಂಕಾರವನ್ನು ಮುರಿಯುತ್ತೇವೆ. ನಮ್ಮ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಆದರೆ, ಕ್ಷಮೆ ಕೇಳಿಲ್ಲ. ಕ್ಷಮೆ ಕೇಳದೆ ನಮ್ಮ ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಇದರ ಪರಿಣಾಮ ಎದುರಿಸಲು ಸಿದ್ಧರಾಗಿರಿ ಎಂದು ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಜೀವ ಬೆದರಿಕೆ ಹಾಕಲಾಗಿತ್ತು. ಹೀಗಾಗಿಯೇ ಪೊಲೀಸರು ಇದೀಗ ಕೇಸ್​ ದಾಖಲಿಸಿಕೊಂಡಿದ್ದಾರೆ. ಗ್ಯಾಂಗ್​ಸ್ಟರ್ ಈಗಾಗಲೇ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿದ್ದಾನೆ. ಸದ್ಯ ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಈ ಹಿಂದೆಯೂ ಸಲ್ಮಾನ್​ಗೆ ಬೆದರಿಕೆ: 2022ರ ಮೇ 29ರಂದು ಪಂಜಾಬ್​ನ ಮಾನ್ಸಾದಲ್ಲಿ ಪಂಜಾಬಿ ಗಾಯಕ ಸಿಧು ಮುಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆಗಲೂ ಕೂಡ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಅಲ್ಲದೇ, ಈ ಬಗ್ಗೆ ಪಂಜಾಬ್​ ಪೊಲೀಸರು ಮಾಹಿತಿ ನೀಡಿದ್ದರು. ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್​ ಮಾಡಿದ್ದ ಗ್ಯಾಂಗ್​ನವರು ಮುಂಬೈನಲ್ಲಿ ಸಾಕಷ್ಟು ಸಮಯವನ್ನು ಕಳೆದಿದ್ದರು. ಸಾಕಷ್ಟು ಬಾರಿ ಸಂಚಾರ ಕೂಡ ಮಾಡಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಈ ಸಂಬಂಧ ಜೈಲಿನಲ್ಲೇ ಲಾರೆನ್ಸ್ ಬಿಷ್ಣೋಯ್​ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ, ಈ ವಿಷಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಮತ್ತು ಆ ಪತ್ರವನ್ನು ಯಾರು ಕಳುಹಿಸಿದ್ದಾರೆ ಎಂದೂ ನನಗೆ ಗೊತ್ತಿಲ್ಲ ಎಂಬುವುದಾಗಿ ಬಿಷ್ಣೋಯಿ ಹೇಳಿಕೊಂಡಿದ್ದ ಎಂದು ವರದಿಯಾಗಿತ್ತು. ಈ ಇದರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದ್ದಾರೆ. ಜೊತೆಗೆ ಸಲ್ಮಾನ್​ ನಿವಾಸ ಮತ್ತು ಕುಟುಂಬಕ್ಕೂ ಭದ್ರತೆ ನೀಡಿದ್ದರು.

ಇದಕ್ಕೂ ಮೊದಲು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಲಾರೆನ್ಸ್ ಬಿಷ್ಣೋಯ್, 'ನಾನು ಇನ್ನೂ ಗ್ಯಾಂಗ್‌ಸ್ಟರ್ ಆಗಿಲ್ಲ. ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಿದ ದಿನವೇ ಗ್ಯಾಂಗ್‌ಸ್ಟರ್ ಆಗುತ್ತೇನೆ. ಪೊಲೀಸ್​ ಭದ್ರತೆ ತೆಗೆದರೆ ಸಲ್ಮಾನ್‌ರನ್ನು ಕೊಲ್ಲುತ್ತೇನೆ ಎಂದು ಹೇಳಿಕೊಂಡಿದ್ದ. ಇದೇ ವೇಳೆ ಸಲ್ಮಾನ್ ಖಾನ್ ಕ್ಷಮೆ ಯಾಚಿಸಿದರೆ ವಿಷಯ ಮುಗಿಯುತ್ತದೆ. ಸಲ್ಮಾನ್‌ ಬಿಕಾನೇರ್ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕೆಂದು ಬಿಷ್ಣೋಯ್ ಹೇಳಿದ್ದ. ಇನ್ನು, ಕೃಷ್ಣಮೃಗ ಕೊಲೆ ಮಾಡಿದ ಆರೋಪ ಸಲ್ಮಾನ್ ಖಾನ್ ಮೇಲಿದ್ದು, ಇದರ ಸಂಬಂಧ ಈ ಬೆದರಿಕೆ ಹಾಕಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ನ ಟಾರ್ಗೆಟ್ ಲಿಸ್ಟ್‌ನಲ್ಲಿದ್ದ ಸಲ್ಮಾನ್ ಖಾನ್: ಪಂಜಾಬ್ ಡಿಜಿಪಿ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.