ETV Bharat / bharat

ಹುಸಿ ಬಾಂಬ್ ಕರೆ: ಮುಂಬೈನಲ್ಲಿ ಮೂವರು ಅರೆಸ್ಟ್​ - ಮೂವರನ್ನು ಬಂಧಿಸಿದ ಪೊಲೀಸರು

ಸಾಕಷ್ಟು ಆತಂಕ ಸೃಷ್ಟಿಗೆ ಕಾರಣವಾಗಿದ್ದ ಮುಂಬೈನ ಹಲವೆಡೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಯ ಜಾಡು ಹಿಡಿದು ಹೊರಟ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Three arrested after hoax bomb call sends Mumbai police into tizzy
ಮುಂಬೈನಲ್ಲಿ ನಕಲಿ ಬಾಂಬ್ ಕರೆ: ಮೂವರನ್ನು ಬಂಧಿಸಿದ ಪೊಲೀಸರು
author img

By

Published : Aug 8, 2021, 7:46 AM IST

ಮುಂಬೈ(ಮಹಾರಾಷ್ಟ್ರ): ದೇಶದ ವಾಣಿಜ್ಯ ರಾಜಧಾನಿ ಮುಂಬೈನ ಹಲವೆಡೆ ಬಾಂಬ್​ ಇರಿಸಲಾಗಿದೆ ಎಂಬ ಹುಸಿ ಕರೆಯ ಜಾಡು ಹಿಡಿದ ಮುಂಬೈ ಪೊಲೀಸರು ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ದಾದರ್, ಬೈಕುಲ್ಲಾ ರೈಲ್ವೆ ನಿಲ್ದಾಣಗಳು ಮತ್ತು ಅಮಿತಾಬ್ ಬಚ್ಚನ್ ಅವರ ಬಂಗಲೆಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಆರೋಪಿಗಳು ಹುಸಿ ಕರೆ ಮಾಡಿದ್ದರು.

ಮೂರು ರೈಲ್ವೆ ನಿಲ್ದಾಣಗಳು ಮತ್ತು ಅಮಿತಾಬ್ ಬಚ್ಚನ್ ಅವರ ನಿವಾಸದಲ್ಲಿ ಸತತ ಶೋಧ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರ್ಕಾರಿ ರೈಲ್ವೆ ಪೊಲೀಸ್, ರೈಲ್ವೆ ಪ್ರೊಟೆಕ್ಷನ್ ಫೋರ್ಸ್, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ಎಲ್ಲಾ ಸ್ಥಳಗಳಿಗೆ ಧಾವಿಸಿ ಶೋಧಕಾರ್ಯ ನಡೆಸಿ, ಯಾವುದೇ ಅನುಮಾನಾಸ್ಪದ ವಸ್ತುಗಳು ಇಲ್ಲದ ಬಗ್ಗೆ ದೃಢಪಡಿಸಿಕೊಂಡಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕ ಸ್ಥಗಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.