ಚೆನ್ನೈ: ಇಂದು ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ ನಡೆಯುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಅವರು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ವ್ಯಾಕ್ಸಿನ್ ಡ್ರೈರನ್ ಪರಿಶೀಲಿಸಿದರು.
ಇದೇ ವೇಳೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್, ಜನವರಿ 17 ರಂದು ರಾಷ್ಟ್ರೀಯ ರೋಗ ನಿರೋಧಕ ದಿನ ಆಚರಣೆ ಮಾಡಲಾಗುವುದು. ಅಂದಿನಿಂದ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ನೀಡಲಾಗುವುದು. ದೇಶದ ಎಲ್ಲ ತಾಯಂದಿರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಭಾರತವನ್ನು ರೋಗ ನೀರೋಧಕ ದೇಶವಾಗಿ ಮಾಡಲು ಸಹಕರಿಸಬೇಕು ಎಂದು ಹೇಳಿದರು.
ಮೊದಲ ದಿನ ಕೇಂದ್ರದಲ್ಲಿ ಲಸಿಕೆ ಹಾಕಲಾಗುತ್ತದೆ. ಬಳಿಕ ಎರಡು ದಿನ ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆ ನೀಡುತ್ತಾರೆ. ಜನವರಿ 17 ರಿಂದ ಮೂರು ದಿನಗಳ ಕಾಲ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿಶೇಷವಾಗಿ ನಮ್ಮ ದೇಶದ ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಇದು ಅವಶ್ಯಕವಾಗಿದೆ. ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.