ಲಖನೌ(ಉತ್ತರ ಪ್ರದೇಶ): ನಕಲಿ ಮದ್ಯ ಸೇವಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಲಖನೌ ನಗರದ ಬಂಥಾರಾ ಪ್ರದೇಶದಲ್ಲಿ ನಡೆದಿದೆ.
ಗುರುವಾರ ಮಧ್ಯರಾತ್ರಿ ಸುಂದರ್ ಲಾಲ್(35), ಅಚ್ಚೆ(30), ರಾಜ್‌ಕುಮಾರ್ (32) ಎಂಬುವವರು ತಮ್ಮ ಇಬ್ಬರು ಸ್ನೇಹಿತರ ಜೊತೆಗೂಡಿ ನಕಲಿ ಮದ್ಯ ಸೇವಿಸಿದ್ದರು. ಈ ವೇಳೆ ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೂವರೂ ಮೃತಪಟ್ಟಿದ್ದಾರೆ.
ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ತನಿಖೆ ಮುಂದುವರೆಯುತ್ತಿದೆ ಎಂದು ಡಿಸಿಪಿ ಸೋಮೆನ್ ಬಾರ್ಮಾ ತಿಳಿಸಿದ್ದಾರೆ.
ಮದ್ಯ ಮಾರಾಟ ಮಾಡಿದ ವ್ಯಕ್ತಿ ಪರಾರಿಯಾಗಿದ್ದು, ಅತನಿಗಾಗಿ ಹುಡುಕಾಟ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಮತ್ತಷ್ಟು ಮಾಹಿತಿ ಸಿಗಲಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.