ETV Bharat / bharat

ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು, ಐವರ ಸ್ಥಿತಿ ಗಂಭೀರ - ಕೇಂದ್ರ ರಾಜ್ಯ ಸಚಿವ ಅರ್ಜುನ್ ಮೇಘವಾಲ್

ರಾಜಸ್ಥಾನದಲ್ಲಿ ಕಟ್ಟಡ ಕುಸಿದು ಭಾರಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಮೂರು ಜನರು ಸಾವನ್ನಪ್ಪಿದ್ದರೆ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

-bikaner
ನಿರ್ಮಾಣ ಹಂತದ ಕಟ್ಟಡ ಕುಸಿತ
author img

By

Published : Jun 20, 2021, 10:04 PM IST

ಬಿಕಾನೇರ್ (ರಾಜಸ್ಥಾನ): ಜಿಲ್ಲೆಯ ಉಪನಗರವಾದ ಗಂಗಾಶಹರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂರು ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ ಬಿಕಾನೇರ್‌ನಲ್ಲಿ ಮಳೆಯಾಗಿದ್ದು, ಪರಿಣಾಮ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ಈ ಅಪಘಾತದಲ್ಲಿ 3 ಜನರು ಕೊನೆಯುಸಿರೆಳೆದಿದ್ದಾರೆ. ಅವಘಡದ ನಂತರ ಸುತ್ತಮುತ್ತಲಿನ ಜನರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮೃತಪಟ್ಟ ಮತ್ತು ಗಾಯಗೊಂಡ ಜನರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದರು ಎಂದು ಹೇಳಲಾಗುತ್ತಿದೆ.

ಬಿಕಾನೇರ್‌ನ ಗಂಗಾಶಹರ್ ನಗರದ ಜೈನ ಕಾಲೇಜಿನ ಮುಂಭಾಗದಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಂತರ, ಪೊಲೀಸರು ಮತ್ತು ಸ್ಥಳೀಯ ಕೌನ್ಸಿಲರ್‌ಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ದುರಂತಕ್ಕೆ ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಮತ್ತು ಇಂಧನ ಸಚಿವ ಬಿ.ಡಿ. ಕಲ್ಲಾ ಸಂತಾಪ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.