ದುರ್ಗಾಪುರ(ಪಶ್ಚಿಮ ಬಂಗಾಳ): ಇಲ್ಲಿನ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ದುರ್ಗಾಪುರದ ಸ್ಟೀಲ್ ಪ್ಲಾಂಟ್ನಲ್ಲಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ, ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಾನಿಲ ಸೇವನೆಯಿಂದ ಮೃತ ಕಾರ್ಮಿಕರನ್ನು ಸಜಲ್ ಚೌಹಾಣ್, ಸಿಂಟು ಯಾದವ್ ಮತ್ತು ಸಂತೋಷ್ ಚೌಹಾಣ್ ಎಂದು ಗುರುತಿಸಲಾಗಿದೆ. ಅಲ್ಲದೇ, ಸ್ಥಾವರದಲ್ಲಿ ಕೆಲಸ ಮಾಡುವ ಉಳಿದ ಕಾರ್ಮಿಕರು ಘಟನೆಯಿಂದ ಭಯಭೀತರಾಗಿದ್ದಾರೆ.
ಸ್ಟೀಲ್ ಪ್ಲಾಂಟ್ನಲ್ಲಿ ಪದೇ ಪದೆ ಅನಿಲ ಸೋರಿಕೆಯ ಘಟನೆಗಳು ಸಂಭವಿಸುತ್ತಿದ್ದರೂ ಕ್ರಮ ಕೈಗೊಳ್ಳದ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದುರಂತಕ್ಕೆ ಸ್ಟೀಲ್ ಪ್ಲಾಂಟ್ನ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಇಂದು ಮೂವರು ಸಾವನ್ನಪ್ಪುವ ಮೂಲಕ ಕಳೆದ 5 ವರ್ಷಗಳಲ್ಲಿ ಈ ಸ್ಥಾವರದಲ್ಲಿ ಅನಿಲ ಸೋರಿಕೆಯಿಂದಾಗಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ.
ಕಳೆದ ಹಲವು ವರ್ಷಗಳಿಂದ ಸ್ಥಾವರದಲ್ಲಿ ಆಧುನೀಕರಣ ಕಾಮಗಾರಿ ನಡೆದಿಲ್ಲ. ಈ ದಿವ್ಯ ನಿರ್ಲಕ್ಷ್ಯದಿಂದಾಗಿ ಕಾರ್ಮಿಕರು ವಿನಾಕಾರಣ ಬಲಿಯಾಗುತ್ತಿದ್ದಾರೆ ಎಂದು ಕಾರ್ಮಿಕ ಸಂಘಟನೆಗಳು ದೂರಿವೆ.