ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ 2019ರಲ್ಲಿ ನಡೆದ ಭಯೋತ್ಪಾದನೆ ಪ್ರಕರಣದಲ್ಲಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹುಂಜಲ್ಲಾದ ಜಾಫರ್ ಹುಸೇನ್ ಮತ್ತು ಕಿಶ್ತ್ವಾರ್‌ನ ಪೋಚಾಲ್‌ನ ತಾರಕ್ ಹುಸೇನ್ ಗಿರಿ ಮತ್ತು ದೋಡಾ ಜಿಲ್ಲೆಯ ತಂತ್ನ ತನ್ವೀರ್ ಅಹ್ಮದ್ ಮಲಿಕ್ ವಿರುದ್ಧ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.
ಹುಸೇನ್, ಮಲಿಕ್ ಮತ್ತು ಗಿರಿ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಿಗೆ ಬೆಂಬಲ ಮತ್ತು ಆಶ್ರಯವನ್ನು ನೀಡುತ್ತಿದ್ದರು ಎಂದು ವಕ್ತಾರರು ತಿಳಿಸಿದ್ದಾರೆ.
ಈ ಎಲ್ಲ ಭಯೋತ್ಪಾದಕ ಕೃತ್ಯಗಳ ಉದ್ದೇಶವೆಂದರೆ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವ ಮೂಲಕ ಮತ್ತು ನಿರ್ದಿಷ್ಟ ಸಮುದಾಯದ ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕಿಶ್ತ್ವಾರ್‌ನಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸುವುದು ಇವರ ಹುನ್ನಾರವಾಗಿತ್ತು ಎಂದು ಎನ್ಐಎ ಹೇಳಿದೆ.