ETV Bharat / bharat

ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ, ಮೂವರು ಸಾವು: ಬಿಹಾರದಲ್ಲಿ ಉದ್ವಿಗ್ನ ಪರಿಸ್ಥಿತಿ

author img

By

Published : Jul 26, 2023, 4:07 PM IST

Updated : Jul 26, 2023, 6:42 PM IST

ಬಿಹಾರದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ
ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ

ಕತಿಹಾರ್(ಬಿಹಾರ) : ಬಿಹಾರ ಸರ್ಕಾರದ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಲಾಠಿ ಚಾರ್ಜ್​ಗೆ ಬಿಜೆಪಿ ನಾಯಕ ಮೃತಪಟ್ಟ ಘಟನೆ ನಡೆದಿತ್ತು. ಇದು ಮಾಸುವ ಮುನ್ನವೇ, ಇಂದು ಕತಿಹಾರ್​​ ಜಿಲ್ಲೆಯಲ್ಲಿ ನಿಯಮಿತ ವಿದ್ಯುತ್​ ಪೂರೈಕೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸರ ಗುಂಡೇಟಿಗೆ ಮೂವರು ಬಲಿಯಾಗಿದ್ದಾರೆ.

ಕತಿಹಾರ್‌ನಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಯ ವಿರುದ್ಧ ಜನರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಆಕ್ರೋಶ ತಡೆಯಲು ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಗುಂಡೇಟಿಗೆ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಘಟನೆಯ ವಿವರ: ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅನಿಯಮಿತ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿದ್ಯುತ್​ ಇಲಾಖೆ ಕಚೇರಿಯ ಮುಂದೆ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ಸಂಘರ್ಷ ಏರ್ಪಟ್ಟು ಪೊಲೀಸರು ಜನರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಐವರಿಗೆ ಗುಂಡು ತಗುಲಿದೆ. ಇದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಇಬ್ಬರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

  • Bihar: A clash broke out between locals & Police in Kathihar during a protest against the electricity department

    People pelted stones and vandalised the office of the Electricity Department. One person has died and 2 are injured in this incident. DM and SP present on the spot:… pic.twitter.com/q47B9cOXux

    — ANI (@ANI) July 26, 2023 " class="align-text-top noRightClick twitterSection" data=" ">

ಸಾವನ್ನಪ್ಪಿದ ಮೂವರಲ್ಲಿ ಬಾಸಲ್ ಗ್ರಾಮದ ನಿವಾಸಿ ಮೊಹಮ್ಮದ್ ಖುರ್ಷಿದ್ (35) ಮತ್ತು ಚಾಪಖೋಡ್ ಪಂಚಾಯಿತಿಯ ನಿಯಾಜ್ ಆಲಂ (32) ಎಂದು ಗುರುತಿಸಲಾಗಿದ್ದು, ಇನ್ನೊಬ್ಬಾತನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದೇ ವೇಳೆ, ನಡೆದ ಲಾಠಿ ಚಾರ್ಜ್‌ನಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅನಿಯಮಿತ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿದ್ಯುತ್​ ಇಲಾಖೆ ಕಚೇರಿಯ ಮುಂದೆ ಪ್ರತಿಭಟನೆಗೆ ತೆರಳಿದೆವು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಪೊಲೀಸರು ನಮ್ಮ ಮೇಲೆ ಗುಂಡು ಹಾರಿಸಿದರು. ಐದು ಜನರಿಗೆ ಗುಂಡು ತಾಕಿತು. ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನಾಕಾರರೊಬ್ಬರು ಮಾಹಿತಿ ನೀಡಿದ್ದಾರೆ.

ವಿದ್ಯುತ್​ ಕಚೇರಿ ಮೇಲೆ ಕಲ್ಲು ತೂರಾಟ: ಇದರಿಂದ ಆಕ್ರೋಶಿತ ಜನರು ವಿದ್ಯುತ್ ಇಲಾಖೆ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿ ಧ್ವಂಸಗೊಳಿಸಿದ್ದಾರೆ. ಬಸ್ತೌಲ್ ಚೌಕ್ ಮತ್ತು ಪ್ರಾಣ್‌ಪುರದ ಬರ್ಸೋಯ್ ಬ್ಲಾಕ್ ಪ್ರಧಾನ ಕಚೇರಿ ಬಳಿಯ ಮುಖ್ಯ ರಸ್ತೆಯನ್ನು ಬಂದ್​ ಮಾಡಿದ್ದಾರೆ. ಘಟನೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಬುಧವಾರ ನಿರ್ವಹಣಾ ಕಾರ್ಯದಿಂದಾಗಿ ಬೆಳಗ್ಗೆ 5 ರಿಂದ 11 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ; Fake Astrologer: ಮನೆ ದೋಚಿ ನಿಂಬೆ ಹಣ್ಣಿಟ್ಟು ಪರಾರಿಯಾದ ಜ್ಯೋತಿಷಿ ವಿರುದ್ಧ ಬೆಂಗಳೂರಿನಲ್ಲಿ FIR

Last Updated : Jul 26, 2023, 6:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.