ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದೆ. ಇಂದು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಇಲ್ಲಿನ ಹಸನ್‌ಪುರ ಇಮಾಮ್ ಸಾಹಿಬ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಮೇರೆಗೆ ಕೂಡಲೇ ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್ಪಿಎಫ್ನ 178 ಬೆಟಾಲಿಯನ್ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಶುರು ಮಾಡಿದರು.
ಈ ವೇಳೆ ಭದ್ರತಾ ಪಡೆಗಳು ಅನುಮಾನಾಸ್ಪದ ಮನೆಯತ್ತ ತೆರಳಲು ಆರಂಭಿಸಿದಾಗ ಅಲ್ಲಿದ್ದ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಇದರಿಂದ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ಪರಿಣಾಮ, ಮೂವರು ಸ್ಥಳೀಯ ಉಗ್ರರು ಹತರಾದರು ಎಂದು ಸೇನೆಯ ಮೂಲಗಳು ತಿಳಿಸಿವೆ.
ಹತರಾದ ಉಗ್ರರ ಗುರುತನ್ನು ಇನ್ನು ಭದ್ರತಾ ಪಡೆಗಳು ಬಹಿರಂಗ ಪಡಿಸಿಲ್ಲ. ಸದ್ಯಕ್ಕೆ ಇದೇ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಗುಂಡಿನ ಚಕಮಕಿ ನಿಂತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮಹಿಳೆಯರ ಲೆಹಂಗಾ ಬಟನ್ನಲ್ಲಿಟ್ಟು ₹41 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಸಾಗಣೆ: ವಿಡಿಯೋ