ಪುರಿ, ಒಡಿಶಾ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೇವಲ ಮೂರು ದಿನಗಳಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಮತ್ತು ಅತ್ಯಾಚಾರ ಯತ್ನದಂತಹ ಪ್ರಕರಣಗಳು ಒಡಿಶಾದ ಪುರಿ ಮತ್ತು ಹಲವೆಡೆ ಬೆಳಕಿಗೆ ಬಂದಿವೆ.
ಮೊದಲ ಪ್ರಕರಣದಲ್ಲಿ ಎರಡು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆಕೆಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪುರಿ ಜಿಲ್ಲೆಯ ಸೀ ಬೀಚ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಕಳೆದ ವರ್ಷ ಈ ವ್ಯಕ್ತಿ ತನ್ನ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ 8 ತಿಂಗಳ ಕಾಲ ಜೈಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕನ್ ಸಾಂಬಾರ್ ಆಮಿಷವೊಡ್ಡಿ ಅತ್ಯಾಚಾರ: ಎರಡನೇ ಪ್ರಕರಣದ ಬಲಿಪಂಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮಂಗಳವಾರ ಐದು ವರ್ಷದ ನೆರೆಮನೆಯ ಬಾಲಕಿಯ ಮೇಲೆ ಅತ್ಯಾಚಾರದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಿಕನ್ ಸಾಂಬಾರ್ ಕೊಡುವುದಾಗಿ ತನ್ನ ಮನೆಗೆ ಕರೆದೊಯ್ದು, ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾಳೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಕಟಕ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಆರೋಪಿ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಪುರಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಶೇಷಚೇತನ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಮಯೂರ್ಭಂಜ್ ಬಡಸಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ವಿಶೇಷ ಚೇತನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಸ್ವಯಂಘೋಷಿತ ದೇವಮಾನವನನ್ನು ಮಂಗಳವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಜನವರಿ 23ರಂದು ಸಂತ್ರಸ್ತೆಯ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಪೋಷಕರು ಈ ವಿಷಯವನ್ನು ಗ್ರಾಮದಲ್ಲಿ ಪಂಚಾಯ್ತಿ ಮಾಡಿಸಿದ್ದು, ಆರೋಪಿಗೆ 90 ಸಾವಿರ ದಂಡವನ್ನು ವಿಧಿಸಲಾಗಿದೆ. ಆದರೆ ಆತ 5 ಸಾವಿರ ರೂಪಾಯಿ ದಂಡವನ್ನು ಮಾತ್ರ ಪಾವತಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಪೊಲೀಸರು ತನಿಖೆ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಬಾಲ್ಯ ವಿವಾಹ ವಿರೋಧಿಸಿದ್ದಕ್ಕೆ ಹುಡುಗಿಯ ಅಣ್ಣನಿಗೇ ಚಾಕು ಇರಿತ : ಆರೋಪಿ ನಾಪತ್ತೆ