ಗ್ವಾಲಿಯರ್ (ಮಧ್ಯಪ್ರದೇಶ): ರಾಜಮನೆತನಕ್ಕೆ ಸೇರಿದ ಅಂಚೆ ಕಚೇರಿ ಕಟ್ಟಡದ ಮೇಲೆ ತ್ರಿವರ್ಣ ಧ್ವಜ ಇರಿಸುವ ವೇಳೆ ಅಗ್ನಿಶಾಮಕ ದಳದ ಕ್ರೇನ್ ಮುರಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಮೃತರು ಅಗ್ನಿಶಾಮಕ ದಳದ ಸಿಬ್ಬಂದಿಯಾಗಿದ್ದಾರೆ. ಅಂಚೆ ಕಚೇರಿಯ ಸೆಕ್ಯುರಿಟಿ ಗಾರ್ಡ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಗ್ವಾಲಿಯರ್ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೈಕ್ಗೆ ಕಾರು ಡಿಕ್ಕಿಯಾಗಿ ಸರ್ವೆಯರ್ ಸಾವು : CCTVಯಲ್ಲಿ ಭಯಾನಕ ದೃಶ್ಯ ಸೆರೆ
ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಕಟ್ಟಡಗಳನ್ನು ವಿಶೇಷವಾಗಿ ಅಲಂಕರಿಸಲಾಗುತ್ತದೆ. ಹೀಗೆ ರಾಜಮನೆತನಕ್ಕೆ ಸೇರಿದ ಅಂಚೆ ಕಚೇರಿ ಕಟ್ಟಡವವನ್ನು ಅಲಂಕರಿಸುವ ವೇಳೆ ಈ ಅವಘಡ ಸಂಭವಿಸಿದೆ.