ಹಜಾರಿಬಾಗ್ (ಜಾರ್ಖಂಡ್): ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಚೌಪರಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಅದರ ತೀವ್ರತೆಗೆ ಆ ರಸ್ತೆ ಮಾರ್ಗವಾಗಿ ಸಾಗುತ್ತಿದ್ದ ಇತರ ವಾಹನಗಳಿಗೂ ಬೆಂಕಿ ತಗುಲಿದೆ. ಅಗ್ನಿಶಾಮಕ ದಳದೊಂದಿಗೆ ಪೊಲೀಸರು ಹಾಗೂ ಜಿಲ್ಲಾಡಳಿತ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಿದ್ದಾರೆ.
ಇದನ್ನೂ ಓದಿ: ಕುರ್ಕುರೆ-ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 10 ಮಂದಿ ಬಲಿ
ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಸಂತ್ರಸ್ತರ ಕುಟುಂಬಸ್ಥರು ಜಿಲ್ಲಾಡಳಿತದ ಬಳಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.