ETV Bharat / bharat

ಒಂದೇ ಕುಟುಂಬದ ನಾಲ್ವರ ಮೇಲೆ ಗುಂಡಿನ ದಾಳಿ.. ಮೂವರ ದುರ್ಮರಣ - ನಾಲ್ವರ ಮೇಲೆ ಗುಂಡಿನ ದಾಳಿ

ತಡರಾತ್ರಿ ಕುಟುಂಬವೊಂದರ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಮೂವರನ್ನ ಕೊಲೆ ಮಾಡಿದ್ದಾರೆ.

ghaziabad
ghaziabad
author img

By

Published : Jun 28, 2021, 4:27 PM IST

ಗಾಜಿಯಾಬಾದ್​: ಒಂದೇ ಕುಟುಂಬದ ನಾಲ್ವರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆ ದೆಹಲಿಯ ಗಾಜಿಯಾಬಾದ್​ನಲ್ಲಿ ನಡೆದಿದೆ.

ಒಂದೇ ಕುಟುಂಬದ ನಾಲ್ವರ ಮೇಲೆ ಗುಂಡಿನ ದಾಳಿ

ಭಾನುವಾರ ತಡರಾತ್ರಿ ಗಾಜಿಯಾಬಾದ್​ನ ಲೋನಿಯ ಟೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೆಂಪುಕೋಟೆ ಗಲಭೆ ಪ್ರಕರಣ: ಪ್ರಮುಖ ಆರೋಪಿ ಗುರ್ಜೋತ್ ಸಿಂಗ್ ಬಂಧನ

ಮೃತ ಕುಟುಂಬದ ರಾಹಿಸುದ್ದೀನ್​ ಬಟ್ಟೆ ವ್ಯಾಪಾರ ಮಾಡುತ್ತಿದ್ದನು ಎನ್ನಲಾಗಿದ್ದು, ಇವರ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ರಾಹಿಸುದ್ದೀನ್​ ಹಾಗೂ ಆತನ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಹೆಂಡತಿ ಗಾಯಗೊಂಡಿದ್ದಾಳೆ.

ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ಸ್ಥಳದ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕಾಗಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಬೇಕಾಗಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.