ತಿರುನೆಲ್ವೇಲಿ (ತಮಿಳುನಾಡು): ಶಾಲೆಯೊಂದರ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.
ತಿರುನಲ್ವೇಲಿಯ ಶಾಟ್ಫರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸ ನೀಡಲಾಗುತ್ತಿದೆ.
ಇದನ್ನೂ ಓದಿ: ವಡಾ ಪಾವ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ : ಆರೋಪಿಗೆ ಮರಣದಂಡನೆ ಶಿಕ್ಷೆ
ಇದು ಅತ್ಯಂತ ಹಳೆಯ ಶಾಲೆಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ಸಂತಾಪ ಸೂಚಿಸಿದ್ದಾರೆ.