ಕುಶಿನಗರ, ಉತ್ತರ ಪ್ರದೇಶ: ಸಿನಿಮಾ ವೀಕ್ಷಿಸಲು ತೆರಳುತ್ತಿದ್ದ ಮೂವರು ಬಾಲಕರ ಮೇಲೆ ಅಪರಿಚಿತ ವ್ಯಕ್ತಿಗಳು ಚಾಕು ತೋರಿಸಿ ದರೋಡೆಗೆ ಯತ್ನಿಸಿ, ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್‌ನಗರದಲ್ಲಿ ನಡೆದಿದೆ.
ಜೋಕ್ವಾ ಬಜಾರ್‌ನ ನಿವಾಸಿಗಳಾದ 16 ವರ್ಷದ ಕಿಶನ್ ಜೈಸ್ವಾಲ್ , 14 ವರ್ಷದ ಸಾಹು ಜೈಸ್ವಾಲ್ ಮತ್ತು 16 ವರ್ಷದ ಸಚಿನ್ ಗೌರ್ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ವೀಕ್ಷಿಸಲು ಆ ಮೂವರೂ ಥಿಯೇಟರ್‌ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ದುಷ್ಕರ್ಮಿಗಳು ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲು ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ
ಹಲ್ಲೆ ನಡೆಯುವ ವೇಳೆ ಚೀರಾಟ ಕೇಳಿ ಸ್ಥಳೀಯರು ಧಾವಿಸಿದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎಂದು ಗಾಯಾಳುಗಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.