ಬೊಕಾರೊ(ಜಾರ್ಖಂಡ್): ಶಾಲಾ ಆವರಣದಲ್ಲಿ ಮಕ್ಕಳು ಆಡವಾಡ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ. ಎಲ್ಲ ಮಕ್ಕಳನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.
ಬೊಕಾರೊ ಜಿಲ್ಲೆಯ ಜರಿದಿಹ್ ಬ್ಲಾನ್ ಬಂಧ್ದಿಹ್ ಶಾಲೆಯಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದ ಸಂದರ್ಭದಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯ ವಿವಿಧ ಕೊಠಡಿಗಳಲ್ಲಿದ್ದರು.
ಇದನ್ನೂ ಓದಿರಿ: ನಟಿ ಮನೆಯಲ್ಲಿ ಕೋಟಿ - ಕೋಟಿ ಹಣ ಜಪ್ತಿ: ಇಡಿಯಿಂದ ಅರ್ಪಿತಾ ಮುಖರ್ಜಿ ಬಂಧನ
ವಿದ್ಯಾರ್ಥಿಗಳನ್ನ ರೆಫರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರೆದಿದೆ. ಗಂಭೀರವಾಗಿ ಗಾಯಗೊಂಡಿರುವ ಓರ್ವ ವಿದ್ಯಾರ್ಥಿಯನ್ನ ಬೊಕಾರೊ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಡಿಲು ಬಡಿದ ಕಾರಣ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಶಶಿ ಮಹತೊ ಮಾತನಾಡಿದ್ದು, ತುಂತುರು ಮಳೆ ಸುರಿಯುತ್ತಿತ್ತು. ಈ ವೇಳೆ, ರಭಸವಾಗಿ ಗಾಳಿ ಬೀಸಿದ್ದು, ವಿದ್ಯುತ್ ಕೈಕೊಟ್ಟಿದೆ. ಇದರ ಬೆನ್ನಲ್ಲೇ ಸಿಡಿಲು ಬಡೆದಿದೆ. ಹೀಗಾಗಿ, ಮಕ್ಕಳು ಕಿರುಚಾಡಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.