ಚಿತ್ತೂರು: ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದು, ಎಂಟು ಜನ ಗಾಯಗೊಂಡಿರುವ ಘಟನೆ ಮದನಪಲ್ಲೆ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಈಶ್ವರಮ್ಮ ಕಾಲೋನಿ ಯುವಕರು ಶುಕ್ರವಾರ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಮೈದನಾಕ್ಕೆ ಸಿಡಿಲು ಅಪ್ಪಳಿಸಿದ್ದು, 9 ಯುವಕರು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ರೋಷನ್ (25) ಎಂಬ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇನ್ನೊಬ್ಬ ಯುವಕ ಆರೀಫ್ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ಕರೆದೊಯ್ಯಲಾಗಿದೆ. ಇನ್ನುಳಿದ ಏಳು ಯುವಕರ ಸ್ಥಿತಿ ಕೂಡ ಗಂಭೀರವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.