ಚೆನ್ನೈ (ತಮಿಳುನಾಡು): ಮುಂಗಾರು ಮಾನ್ಸೂನ್ ಬಿರುಸು ಪಡೆಯುತ್ತಿದ್ದು, ಮುಂದಿನ 5 ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದು ಕರ್ನಾಟಕದ ಗಡಿಭಾಗಗಳಿಗೂ ಪಸರಿಸಲಿದೆ ಎಂದು ಅಂದಾಜಿಸಲಾಗಿದೆ.
ನೀಲಗಿರಿ, ಕೊಯಮತ್ತೂರು, ತಿರುಪುರ್, ದಿಂಡಿಗಲ್, ಥೇಣಿ, ಈರೋಡ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪೆರಂಬಲೂರ್, ತಿರುವಣ್ಣಾಮಲೈ, ಕಲ್ಲಕುರಿಚಿ, ತಿರುಪತ್ತೂರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಜೂನ್ 20 ರಿಂದ 23 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಪ್ರತ್ಯೇಕವಾದ ಗುಡುಗು ಮತ್ತು ಮಿಂಚುಗಳೊಂದಿಗೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಓದಿ: ಅಗ್ನಿವೀರರ ಸಂಖ್ಯೆ ಮುಂದೆ 1 ಲಕ್ಷಕ್ಕೆ ಹೆಚ್ಚಳ, ಸೇನೆಗೆ ಹೋಶ್, ಜೋಶ್ ಬೇಕಿದೆ: ಸೇನಾ ಮುಖ್ಯಸ್ಥರು