ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ನರ್ನಾಳ ಕೋಟೆಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ. ಈ ವೇಳೆ ಅಲ್ಲೇ ಇದ್ದ ಪ್ರವಾಸಿ ಸಂಜೀವ್ ಭರ್ಸಕ್ಡೆ ತನ್ನ ಮೊಬೈಲ್ನಲ್ಲಿ ಹುಲಿಯ ವಿಡಿಯೋ ಚಿತ್ರೀಕರಿಸಿದ್ದಾರೆ. ಪ್ರವಾಸಿ ತೆಗೆದಿರುವ ಈ ವಿಡಿಯೋ ಈಗ ಭಾರಿ ವೈರಲ್ ಆಗುತ್ತಿದೆ.
ಹುಲಿಯ ರಾಜ ಗಾಂಭೀರ್ಯ ನೋಡುಗರ ಮನ ಸೆಳೆಯುತ್ತಿದೆ. ಇತ್ತೀಚೆಗೆ ದೇಶದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದೆ. ಮಧ್ಯಪ್ರದೇಶದಲ್ಲಿ ಹೆಚ್ಚು ಹುಲಿಗಳಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.