ನವದೆಹಲಿ/ಗಾಜಿಯಾಬಾದ್: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿ ಬಂದಿದೆ.
ಅವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿರುವ ಇವರಿಗೆ ಎರಡು ವಾರಗಳಲ್ಲಿ ಎರಡು ಬೆದರಿಕೆ ಕರೆ ಬಂದಿವೆ.
ಇದನ್ನೂ ಓದಿ:ಕೊರೊನಾ ಸೋಂಕಿತ ವೃದ್ಧನನ್ನು 7 ಕಿ.ಮೀ.ಹೊತ್ತು ಆಸ್ಪತ್ರೆಗೆ ಸೇರಿಸಿದ SDRF..!
ಈ ಕುರಿತು ಕೌಶಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.