ನಾಗ್ಪುರ (ಮಹಾರಾಷ್ಟ್ರ): ರೈತ ಮುಖಂಡ ರಾಕೇಶ್ ಟಿಕಾಯತ್ ಫೆಬ್ರವರಿ 20 ರಂದು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ''ಕಿಸಾನ್ ಮಹಾಪಂಚಾಯತ್'' ಮತ್ತು ಸಾರ್ವಜನಿಕ ರ‍್ಯಾಲಿ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.
ಫೆಬ್ರವರಿ 20ರಂದು ಯವತ್ಮಾಲ್ ನಗರದ ಆಜಾದ್ ಮೈದಾನದಲ್ಲಿ ಕಿಸಾನ್ ಮಹಾಪಂಚಾಯತ್ ಮತ್ತು ಸಾರ್ವಜನಿಕ ಸಭೆಯಲ್ಲಿ ರಾಕೇಶ್ ಟಿಕಾಯತ್, ಯುದ್ವೀರ್ ಸಿಂಗ್ ಮತ್ತು ಎಸ್‌ಕೆಎಂನ ಹಲವಾರು ನಾಯಕರು ಭಾಗಿಯಾಗಲಿದ್ದಾರೆ ಎಂದು ಸಂಘಟನೆಯ ಮಹಾರಾಷ್ಟ್ರದ ಸಂಯೋಜಕ ಸಂದೀಪ್ ಗಿಡ್ಡೆ ತಿಳಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್‌ನಲ್ಲಿ ವಿದರ್ಭ ಮತ್ತು ಮಹಾರಾಷ್ಟ್ರದ ಕೆಲವು ಭಾಗದ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಇದಕ್ಕಾಗಿ ಅಧಿಕಾರಿಗಳಿಂದ ಅನುಮತಿ ಕೋರಲಾಗಿದೆ.
ಈ ಕಾರ್ಯಕ್ರಮಕ್ಕೆ ಸಂಘಟಕರು ಅನುಮತಿ ಕೋರಿದ್ದಾರೆ ಎಂದು ಯವತ್ಮಾಲ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.