ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭ್ರಷ್ಟಾಚಾರ ಮತ್ತು ಕಿರುಕುಳದ ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
"ಪಶ್ಚಿಮ ಬಂಗಾಳದ ಜನರು ಕಾಂಗ್ರೆಸ್, ಎಡ ಮತ್ತು ಟಿಎಂಸಿ ಪಕ್ಷಗಳಿಗೆ 70 ವರ್ಷಗಳನ್ನು ನೀಡಿದ್ದಾರೆ. ಆದರೆ, ಈ ಪಕ್ಷಗಳು ಜನರ ಆಕಾಂಕ್ಷೆಗಳನ್ನು ಈಡೇರಿಸಲಿಲ್ಲ. ಪ್ರಸ್ತುತ, ಟಿಎಂಸಿ ಹಿಂದಿನ ಎಲ್ಲಾ ಕಿರುಕುಳ ಮತ್ತು ಭ್ರಷ್ಟಾಚಾರದ ದಾಖಲೆಗಳನ್ನು ಮುರಿಯುತ್ತಿದೆ" ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ಹೋಟೆಲ್ನಲ್ಲಿ ವೇಶ್ಯಾವಾಟಿಕೆ: 23 ಮಂದಿ ಬಂಧನ
ಇಂದು ಬಂಕುರಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇನ್ನು ಶನಿವಾರದಂದು, ಖರಗ್‌ಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ಬಡವರಿಗಾಗಿ ಬರುವ ಯೋಜನೆಗಳನ್ನು ಪಶ್ಚಿಮ ಬಂಗಾಳ ತಡೆಹಿಡಿದಿದೆ. ಈ ಯೋಜನೆಗಳಿಂದ ಕೇಂದ್ರ ಮನ್ನಣೆ ಗಳಿಸಬಹುದೆಂಬ ಭಯದಿಂದ ಮಮತಾ ಸರ್ಕಾರ ಇದಕ್ಕೆ ತಡೆಯೊಡ್ಡಿದೆ." ಎಂದು ಪ್ರಧಾನಿ ಹೇಳಿದ್ದಾರೆ.
294 ಸದಸ್ಯರ ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆಯ ಚುನಾವಣೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.