ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಟಿಎಂಸಿಗೆ ಮರ್ಮಾಘಾತವಾಗಿದೆ. ಮಮತಾ ಬ್ಯಾನರ್ಜಿ ಸರ್ಕಾರದ ಸಚಿವರು ಒಬ್ಬೊಬ್ಬರಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಪಕ್ಷ ತೊರೆಯುತ್ತಿದ್ದಾರೆ.
ಜನವರಿ 22 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಜೀವ್ ಬ್ಯಾನರ್ಜಿ ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಈ ಕುರಿತ ಪ್ರತಿಕ್ರಿಯೆ ನೀಡಿರುವ ರಾಜೀವ್, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ, ಪಕ್ಷಕ್ಕಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಸುವೆಂದು ಅಧಿಕಾರಿ ಹಾಗೂ ಅವರ ಸಹೋದರ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದೀಗ ರಾಜೀವ್ ಅವರ ರಾಜೀನಾಮೆಯೂ ಪಕ್ಷಕ್ಕೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಕೇಸರಿ ಸರ್ಕಾರ ರಚಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿಗೆ ಟಿಎಂಸಿ ಈ ಬೆಳವಣಿಗೆ ಸಹಕಾರಿಯಾಗಲಿದೆ.