ETV Bharat / bharat

ದೀದಿಗೆ ಹಿನ್ನಡೆ: ರಾಜೀನಾಮೆ ಕೊಟ್ಟ ಸುವೇಂದು ಅಧಿಕಾರಿ ಕಮಲ ಹಿಡೀತಾರಾ? - ರಾಜೀನಾಮೆ ಕೊಟ್ಟ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ಗೆ ಭಾರಿ ಹಿನ್ನಡೆಯಾಗಿದ್ದು, ಬಂಡಾಯ ನಾಯಕ ಸುವೇಂದು ಅಧಿಕಾರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

suvendu adhikari
ಸುವೇಂದು ಅಧಿಕಾರಿ
author img

By

Published : Dec 16, 2020, 5:10 PM IST

ಕೋಲ್ಕತಾ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್​ನ ಬಂಡಾಯ ನಾಯಕ ಸುವೇಂದು ಅಧಿಕಾರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಸ್ಪೀಕರ್​ಗೆ ಕಳುಹಿಸಿದ್ದಾರೆ.

ಹಿಂದಿನ ತಿಂಗಳಷ್ಟೇ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕ್ಯಾಬಿನೆಟ್​​ ಸ್ಥಾನದಿಂದ ಕೆಳಗಿಳಿದಿದ್ದರು. ಇದಾದ ನಂತರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹರಿದಾಡುತ್ತಿದ್ದವು.

ಇಂದು ಸುವೇಂದು ಅಧಿಕಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಕೆಲವರು ಡಿಸೆಂಬರ್ 18ರಂದು ಸುವೇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳನ್ನಾಡುತ್ತಿದ್ದಾರೆ.

ಬಿಜೆಪಿಯ ಮೂಲಗಳ ಪ್ರಕಾರ, ಸುವೇಂದು ಅಧಿಕಾರಿ ಡಿಸೆಂಬರ್ 18ರಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಂತರ ಡಿಸೆಂಬರ್ 19ರಂದು ಅಮಿತ್ ಶಾ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಮಾಡಲಿದ್ದು, ಅವರ ಜೊತೆಯಲ್ಲಿಯೇ ಸುವೇಂದು ಕೂಡಾ ರಾಜ್ಯಕ್ಕೆ ಬರಲಿದ್ದಾರೆ.

ಓದಿ: ಬಂಗಾಳದ ವಿಚಾರದಲ್ಲಿ ಕೇಂದ್ರದ ಹಸ್ತಕ್ಷೇಪ: ಸಿಎಂ ಮಮತಾ ಗರಂ

ಒಂದು ವೇಳೆ ಸುವೇಂದು ಅಧಿಕಾರಿ ದೆಹಲಿ ಪ್ರಯಾಣ ಮಾಡದಿದ್ದರೇ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿಯೇ ಅವರನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳಲಾಗುತ್ತದೆ ಎಂದು ಮತ್ತೆ ಹಲವು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಸುವೇಂದು ಅಧಿಕಾರಿ ಮಾತ್ರವಲ್ಲದೇ ಅವರ ಜೊತೆಯಲ್ಲಿ ಮತ್ತೆ ಐದು ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮತ್ತೊಬ್ಬ ಬಿಜೆಪಿ ಹಿರಿಯ ನಾಯಕ ಸುಳಿವು ನೀಡಿದ್ದಾರೆ.

ಈ ಕುರಿತು ಈಟಿವಿ ಭಾರತ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರೊಂದಿಗೆ ಮಾತನಾಡಿದ್ದು, ಈವರೆಗೂ ನಾವು ನೇರವಾಗಿ ಸುವೇಂದು ಅವರೊಂದಿಗೆ ಮಾತನಾಡಿಲ್ಲ. ಸುವೇಂದು ಅವರಂಥವರು ಬಿಜೆಪಿಗೆ ಬಂದರೆ ಪಕ್ಷದ ಬಲ ಹೆಚ್ಚುತ್ತದೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.