ತ್ರಿಪುರ : ತೃಣಮೂಲ ಕಾಂಗ್ರೆಸ್ ಸಂಸದೆ ಡೋಲಸೇನಾ ಹಾಗೂ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡೋಲಾ ಸೇನಾ, ಧ್ವಜಾರೋಹಣ ಮಾಡಲು ದಕ್ಷಿಣ ತ್ರಿಪುರಾಗೆ ತೆರಳುತ್ತಿದ್ದ ವೇಳೆ ಈ ದುಷ್ಕೃತ್ಯ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡೋಲಸೇನಾ, ಘಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿ ನಿಂತಿದ್ದರು. ನಮ್ಮ ಸಹಾಯಕ್ಕೆ ಅವರು ಬರಲಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಮಕ್ಕಳಲ್ಲಿ ದೇಶಭಕ್ತಿ ಮೂಡಿಸಲು ನೂತನ ಯೋಜನೆ ಘೋಷಿಸಿದ ದೆಹಲಿ ಸಿಎಂ!