ನವದೆಹಲಿ: ದೇಶದ ಜನರ ಕಲ್ಯಾಣಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತದೆ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲು ನಡೆಯುವ ಪ್ರತಿಪಕ್ಷಗಳ(ಕಾಂಗ್ರೆಸ್) ಸಭೆಗೆ ಪಕ್ಷವು ಹಾಜರಾಗುವುದಿಲ್ಲ ಎಂದು ರಾಜ್ಯಸಭಾ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕಲ್ಯಾಣದಂತಹ ಸಾಮಾನ್ಯ ವಿಷಯಗಳಲ್ಲಿ ಅವರು ನಮ್ಮನು ಬೆಂಬಲಿಸುತ್ತಾರೆ. ಆದರೆ, ಇಂದು ತಮ್ಮದೇ ಪಕ್ಷದ ಸಭೆಯನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆಗೆ ಟಿಎಂಸಿ ಹಾಜರಾಗುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಒಮ್ಮತ ಮೂಡಿಸಲು ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಪ್ರತಿಪಕ್ಷಗಳ ನಾಯಕರ ಸಭೆ ನಡೆಸಲಿದ್ದಾರೆ.
ಸೋಮವಾರ ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ ಅವರು ಕರೆದಿರುವ ಕಾಂಗ್ರೆಸ್ ನಾಯಕರ ಸಭೆಗೆ ಟಿಎಂಸಿ ಹಾಜರಾಗುವುದಿಲ್ಲ, ಆದರೆ ಪ್ರಧಾನಿ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯಸಭಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಎರಡೂ ಸಭೆಗಳಲ್ಲಿ ಖಂಡಿತವಾಗಿಯೂ ಭಾಗವಹಿಸಲಿದೆ ಎಂದು ಟಿಎಂಸಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಚಳಿಗಾಲದ ಅಧಿವೇಶನ ನ.29 ರಂದು ಪ್ರಾರಂಭವಾಗಲಿದ್ದು, ಡಿ.23 ರಂದು ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ.. 3 ಕೃಷಿ ಕಾನೂನುಗಳು ವಾಪಸ್!